ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
Tumkurnews
ತುಮಕೂರು; ಅಪರೇಲ್ ಟ್ರೈನಿಂಗ್ ಅಂಡ್ ಡಿಸೈನ್ ಸೆಂಟರ್ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ನೀಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 5ನೇ ತರಗತಿ ಪಾಸಾಗಿರಬೇಕು. 18 ರಿಂದ 35 ವರ್ಷದ ವಯೋಮಾನದವರಾಗಿದ್ದು, ತುಮಕೂರು ಜಿಲ್ಲೆಯ ನಿವಾಸಿಯಾಗಿರಬೇಕು. ಆಸಕ್ತರು ಎಟಿಡಿಸಿ, ಸಿದ್ದರಾಮಣ್ಣ ಹಾಸ್ಟಲ್ ಕಾಂಪೌಂಡ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಎದುರು, ತುಮಕೂರು ಕಚೇರಿಗೆ ಮೂಲ ದಾಖಲಾತಿಗಳೊಂದಿಗೆ ಡಿ.12ರೊಳಗಾಗಿ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2251618, ಮೊ.ಸಂ. 9844077096ಯನ್ನು ಸಂಪರ್ಕಿಸಬಹುದು.
ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ
+ There are no comments
Add yours