ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
Tumkurnews
ತುಮಕೂರು; ಮಹಾನಗರ ಪಾಲಿಕೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಕಿರು ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ಈ ಯೋಜನೆಯಡಿ ಬ್ಯಾಂಕುಗಳಿಂದ 10,000 ರೂ.ಗಳ ಕಿರು ಸಾಲವನ್ನು ನೀಡಲಾಗುವುದು. ಈ ಸೌಲಭ್ಯ ಪಡೆಯಲಿಚ್ಛಿಸುವವರು ತಮ್ಮ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಆಹಾರ ಪಡಿತರ ಚೀಟಿ, ಜಾತಿ, ಆದಾಯ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ, ವ್ಯಾಪಾರ ಮಾಡುತ್ತಿರುವ ಫೋಟೋ, ಕುಟುಂಬದ ಫೋಟೋ, ಇತರೆ ದಾಖಲಾತಿಗಳಿದ್ದಲ್ಲಿ ತುಮಕೂರು ಮಹಾನಗರಪಾಲಿಕೆಯ ಡೇ-ನಲ್ಮ್ ಶಾಖೆಗೆ ಸಲ್ಲಿಸಬಹುದಾಗಿದೆ.
ಪಾಲಿಕೆ ಸಮೀಕ್ಷೆ ಮೂಲಕ ಗುರುತಿಸಿದ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಪಾಲಿಕೆಯ ಡೇ-ನಲ್ಮ್ ಶಾಖೆಯಿಂದ ನೀಡಲಾಗುತ್ತಿದ್ದು, ಅರ್ಹ ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಪಡೆಯಲು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭೀಮಸಂದ್ರಪಾಳ್ಯ ಸರ್ಕಾರಿ ಶಾಲೆ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ; ಶಾಸಕ ಜಿ.ಬಿ ಜ್ಯೋತಿಗಣೇಶ್
+ There are no comments
Add yours