Tumkur news
ತುಮಕೂರು; ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯೋರ್ವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಘಟನೆ ನಡೆದಿದೆ.
ವಿವಿಯಲ್ಲಿ ಕನ್ನಡ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಮಲ್ಲಿಕಾರ್ಜುನ ಎನ್. ಎಂಬಾತ ಮನೆಗೆಲಸ ಮಾಡುವ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ವಿದ್ಯಾಭ್ಯಾಸಕ್ಕಾಗಿ ನಗರದಲ್ಲಿ ನೆಲೆಸಿದ್ದ ಈತ ತಾನು ಉಳಿದುಕೊಂಡಿದ್ದ ರೂಂನಲ್ಲಿ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸದ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಎಫ್.ಐ.ಆರ್ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ಸದರಿ ಘಟನೆ ಡಿ.22ರಂದು ಬೆಳಕಿಗೆ ಬಂದಿದ್ದು, ಈವರೆಗೂ ಆರೋಪಿ ಪತ್ತೆಯಾಗಿಲ್ಲ.
+ There are no comments
Add yours