ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
Tumkurnews
ತುಮಕೂರು; ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿ ಜಿಕೆಬಿಎಂಎಸ್ ಶಾಲೆ ಆವರಣದಲ್ಲಿ ಪಾಳು ಬಿದ್ದಿರುವ ಶೆಡ್ ಬಳಿ ಸುಮಾರು 25 ರಿಂದ 30 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತನ ಮುಖ ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ದೇಹದ ಮೇಲೆ ಕಪ್ಪು ಬಣ್ಣದ ಟೀ-ಷರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಇರುತ್ತದೆ. ಸುಮಾರು 12 ರಿಂದ 15 ದಿನಗಳ ಹಿಂದೆಯೇ ಮೃತಪಟ್ಟಿರುವಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಮೃತ ವ್ಯಕ್ತಿಯು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು ಹೊಂದಿದ್ದು, ಈತನ ವಾರಸುದಾರರ ಬಗ್ಗೆ ಮಾಹಿತಿ ತಿಳಿದಿಲ್ಲ. ಮೃತ ವ್ಯಕ್ತಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ದೂ.ವಾ.ಸಂ. 08132-220229, 0816-2272451ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
 
                                             
                                             
                                             
                                             
                                             
                                             
                                             
                                             
                                            
 
                                     
                                     
                                     
                                    


 
                                     
                                     
                                    
+ There are no comments
Add yours