ಹೊಸ ವರ್ಷಾಚರಣೆ; ದೇವರಾಯನದುರ್ಗ ಸೇರಿ 3 ಕಡೆ ಪ್ರವೇಶ ನಿಷೇಧ

1 min read

 

ಹೊಸ ವರ್ಷಾಚರಣೆ: ಸಾರ್ವಜನಿಕರ ಪ್ರವೇಶ ನಿರ್ಬಂಧ

Tumkurnews
ತುಮಕೂರು; ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯಿಂದ 2023ರ ಜನವರಿ 2ರ ಬೆಳಿಗ್ಗೆ 8 ಗಂಟೆಯವರೆಗೆ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಆದೇಶ ಹೊರಡಿಸಿದ್ದಾರೆ.
ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಬೆಟ್ಟಕ್ಕೆ 2023ರ ಹೊಸ ವರ್ಷಾಚರಣೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಭೇಟಿ ನೀಡಲಿದ್ದು, ಸಂಭ್ರಮಾಚರಣೆ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವಗಳು ಇರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.
ಸಾರ್ವಜನಿಕರು ಮದ್ಯಪಾನ ಮಾಡಿ ಹಾಗೂ ಜಾಲಿರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸುವ ಹಾಗೂ ಈ ಪ್ರದೇಶಗಳು ಸುರಕ್ಷಿತ ಅರಣ್ಯ ಆವೃತ ಪ್ರದೇಶಗಳಾಗಿದ್ದು, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ.
ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ನಾಮದ ಚಿಲುಮೆ, ಬಸದಿ ಬೆಟ್ಟ, ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿ ಗುಂಪು ಘರ್ಷಣೆಗಳಾಗಿ ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವವಿರುವುದರಿಂದ ಈ ನಿರ್ಬಂಧವನ್ನು ಹೇರಲಾಗಿದೆ. ಆದರೆ ನಿರ್ಬಂಧಿತ ಅವಧಿಯಲ್ಲಿ ಮೇಲ್ಕಾಣಿಸಿದ ಮಾರ್ಗವಾಗಿ ದೈನಂದಿನ ಚಟುವಟಿಕೆಗಳಿಗೆ ತೆರಳುವ ಸ್ಥಳೀಯರು ಸದರಿ ಮಾರ್ಗಮಧ್ಯೆ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ತೆರಳಲು ಅನುಮತಿ ನೀಡಲಾಗಿದೆ ಎಂದು ಅವರು ಸೂಚನೆ ನೀಡಿದ್ದಾರೆ.

About The Author

You May Also Like

More From Author

+ There are no comments

Add yours