ಯುವತಿ ಕಾಣೆ
Tumkurnews
ತುಮಕೂರು; ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಊರ್ಡಿಗೆರೆ ಹೋಬಳಿ ರಿಸಾಲೆಪಾಳ್ಯ ಗ್ರಾಮದಿಂದ 19 ವರ್ಷದ ಸಲ್ಮಾಬಾನು ಎಂಬ ಯುವತಿಯು ಡಿ.16ರಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಮನೆಯಿಂದ ಹೋದವಳು ಮರಳಿ ಬಾರದೆ ಕಾಣೆಯಾಗಿರುತ್ತಾಳೆ ಎಂದು ಈಕೆಯ ತಾಯಿ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾದ ಯುವತಿಯು 4.5 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಬಣ್ಣದ ಬುರ್ಖಾ ಧರಿಸಿರುತ್ತಾಳೆ.
ಈಕೆಯ ಬಗ್ಗೆ ಸುಳಿವು ಸಿಕ್ಕಲ್ಲಿ ದೂ.ವಾ.ಸಂ. 0816-2278000, 2281120, 2281124ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
+ There are no comments
Add yours