Tumkur news
ತುಮಕೂರು; ನಗರದ ಬಿ.ಎಚ್ ರಸ್ತೆಯಲ್ಲಿರುವ ಆರ್.ಟಿ.ಓ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಾಲ್ವರು ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಚಾಂದ್ ಪಾಷಾ ಎನ್ನುವ ಮದ್ಯವರ್ತಿಯೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವಿಷಯ ತಿಳಿಯುತ್ತಿದ್ದಂತೆ ಇನ್ನುಳಿದ ಮದ್ಯವರ್ತಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
+ There are no comments
Add yours