ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
Tumkurnews
ತುಮಕೂರು; ಎಸ್‍ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ಊಟ ಮತ್ತು ವಸತಿಯೊಂದಿಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಫೆ.6ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು-572104 ಅಥವಾ ದೂ.ವಾ.ಸಂ. 0816-2243386, ಮೊ.ಸಂ.9449173386, 9738351048ನ್ನು ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
(ಚಿತ್ರ; ಸಾಂದರ್ಭಿಕ)
+ There are no comments
Add yours