ಗುಬ್ಬಿ ತಾಲ್ಲೂಕು ಹೆಚ್‍ಎಎಲ್ ಘಟಕ ಉದ್ಘಾಟನಾ ಕಾರ್ಯಕ್ರಮ: ಸಂಚಾರ ಮಾರ್ಗ ಬದಲಾವಣೆ
Tumkurnews
ತುಮಕೂರು; ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 6, 2023ರಂದು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಹೆಚ್‍ಎಎಲ್ ಘಟಕ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆ ದಿನದಂದು ಭಾರಿ ಸರಕು ಸಾಗಾಣಿಕೆ ವಾಹನಗಳು ಮತ್ತು ಕೆಎಸ್‍ಆರ್‍ಟಿಸಿ ಬಸ್‍ಗಳು ಈ ಕೆಳಕಂಡಂತೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶಿಸಿದ್ದಾರೆ.
ಫೆ.6ರಂದು ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆ.ಬಿ.ಕ್ರಾಸ್‍ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳನ್ನು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸುವುದು. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.
+ There are no comments
Add yours