ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
Tumkurnews
ತುಮಕೂರು; ಸಮಾಜ ಕಲ್ಯಾಣ ಇಲಾಖೆಯಿಂದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಕೋರ್ಸುಗಳ ವಿದ್ಯಾರ್ಥಿಗಳಿಗಾಗಿ 2022ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಪೋರ್ಟಲ್ ತಂತ್ರಾಂಶದಲ್ಲಿ ಜಾಲತಾಣ sw.kar.nic.in ಮೂಲಕ ಫೆ.28ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours