ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಪಟ್ಟಿ ಪ್ರಕಟ

1 min read

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಪಟ್ಟಿ ಪ್ರಕಟ

Tumkurnews
ತುಮಕೂರು; ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6-8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ https://schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6-8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ ಈ ಹಿಂದೆ 2022ರ ನವೆಂಬರ್ 18ರಂದು ಪ್ರಕಟಿಸಲಾಗಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಲಾಗಿದ್ದು, ಮಾನ್ಯ ಉಚ್ಛ ನ್ಯಾಯಾಲಯದ ತೀರ್ಪಿನಂತೆ ಹೊಸದಾಗಿ ಸಿದ್ಧಪಡಿಸಿ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 4ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದ್ದಾರೆ.

ಉನ್ನತ ಶಿಕ್ಷಣದ ಕನಸು ಕಂಡವರಿಗೆ ಮುಕ್ತ ವಿಶ್ವವಿದ್ಯಾನಿಲಯ ಸಿಹಿ ಸುದ್ದಿ!

About The Author

You May Also Like

More From Author

+ There are no comments

Add yours