ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
Tumkurnews
ತುಮಕೂರು; ಮಾರ್ಚ್ 12ರಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗಾಗಿ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 12ರಂದು ಪ್ರವೇಶ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಗಳನ್ನು ಲೋಪದೋಷವಿಲ್ಲದಂತೆ ನಡೆಸಲು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ನಿಷೇಧಾಜ್ಞೆಯು ಮಾರ್ಚ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆ್ಯಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷೆಯ ಮುಖ್ಯ ಅಧೀಕ್ಷರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಮಾತ್ರ ಅವಕಾಶವಿದ್ದು, ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು, ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳೆಂದು ಕಂಡು ಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
+ There are no comments
Add yours