ತುಂತುರು ನೀರಾವರಿ ಘಟಕ ಸೌಲಭ್ಯ: ಅರ್ಜಿ ಆಹ್ವಾನ

1 min read

 

ತುಂತುರು ನೀರಾವರಿ ಘಟಕ ಸೌಲಭ್ಯ: ಅರ್ಜಿ ಆಹ್ವಾನ

Tumkurnews
ತುಮಕೂರು; ಪಾವಗಡ ತಾಲ್ಲೂಕು ರೈತರಿಗೆ ಪ್ರಧಾನ ಮಂತ್ರಿಗಳ ಕೃಷಿ ಸಿಂಚಾಯಿ ಯೋಜನೆ-ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಶೇ.90ರ ಸಹಾಯಧನದಲ್ಲಿ ತುಂತುರು ನೀರಾವರಿ ಘಟಕ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ನೀರಿನ ಸಮರ್ಥ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಈ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಸೌಲಭ್ಯ ಪಡೆಯಲಿಚ್ಛಿಸುವ ರೈತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಪಹಣಿ, ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್, ಬೆಳೆ ಮತ್ತು ನೀರಿನ ಮೂಲದ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ(ಪ.ಜಾತಿ/ಪಂಗಡದವರಾಗಿದ್ದಲ್ಲಿ), 20 ರೂ. ಛಾಪಾ ಕಾಗದವನ್ನು ಲಗತ್ತಿಸಿ ಮಾರ್ಚ್ 15ರೊಳಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಬಹುದಾಗಿದೆ ಎಂದು ಪಾವಗಡ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮಾರ್ಚ್ 12ರಂದು ನಿಷೇದಾಜ್ಞೆ; ಜಿಲ್ಲಾಧಿಕಾರಿ ಆದೇಶ

ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಂದೆ; ಜೀವಾವಧಿ ಶಿಕ್ಷೆ ನೀಡಿದ ಕೋರ್ಟ್

About The Author

You May Also Like

More From Author

+ There are no comments

Add yours