ಟ್ಯಾಕ್ಸಿ, ಆಟೋರಿಕ್ಷಾ ಚಾಲಕರ ಮಕ್ಕಳಿಗೂ ವಿದ್ಯಾನಿಧಿ
Tumkurnews
ಬೆಂಗಳೂರು; ಕರ್ನಾಟಕ ರಾಜ್ಯ ಸರ್ಕಾರವು ಎಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ಸೌಲಭ್ಯವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ರಾಜ್ಯದ ಅರ್ಹ ಫಲಾನುಭವಿಗಳು ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ಎಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಗೆ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ. ಈ ಯೋಜನೆಯು 2022-23ನೇ ಸಾಲಿನ ಆರ್ಥಿಕ ವರ್ಷದಿಂದ ಅನ್ವಯವಾಗುತ್ತದೆ.
ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ರೂಪದಲ್ಲಿ ವಿದ್ಯಾರ್ಥಿ ವೇತನವನ್ನು ಪಾವತಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಯನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಅಥವಾ ಮಾರ್ಚ್ 18ರೊಳಗಾಗಿ ಸ್ಥಳೀಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪಡೆದುಕೊಳ್ಳಬಹುದಾಗಿದೆ.
ಬಿಜೆಪಿ ಸರ್ಕಾರದ ಸಾಧನೆಗಳೇನು?; ಪ್ರೋಗ್ರೆಸ್ ಕಾರ್ಡ್ ಮಂಡಿಸಿದ ಸಿಎಂ ಬೊಮ್ಮಾಯಿ
+ There are no comments
Add yours