ಎಡೆಯೂರು ಸಿದ್ಧಲಿಂಗೇಶ್ವರ ಜಾನುವಾರು ಜಾತ್ರೆ
Tumkurnews
ತುಮಕೂರು; ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಗ್ರಾಮದಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 6ರವರೆಗೆ ನಡೆಯಲಿರುವ ಶ್ರೀ ಎಡೆಯೂರು ಸಿದ್ಧಲಿಂಗೇಶ್ವರ ಜಾನುವಾರು ಜಾತ್ರೆಯಲ್ಲಿ ಹೊರ ಜಿಲ್ಲೆಯಿಂದ ಭಾಗವಹಿಸುವ ಜಾನುವಾರು ಪಾಲಕರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಚರ್ಮಗಂಟು ರೋಗದ ವಿರುದ್ಧ ಲಸಿಕೆ ಹಾಕಿಸಿರಬೇಕು ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಜಯಣ್ಣ ತಿಳಿಸಿದ್ದಾರೆ.
ಜಾನುವಾರು ಜಾತ್ರೆಯಲ್ಲಿ ಭಾಗವಹಿಸುವ 15 ದಿನಗಳ ಮುನ್ನವೇ ತಮ್ಮ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕೆ ಹಾಕಿಸಿರುವ ಬಗ್ಗೆ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ ದೃಢೀಕರಣ ಪಡೆದು ಜಾತ್ರೆಯಲ್ಲಿ ಹಾಜರುಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಮಾರ್ಚ್ 12ರಂದು ನಿಷೇದಾಜ್ಞೆ; ಜಿಲ್ಲಾಧಿಕಾರಿ ಆದೇಶ
+ There are no comments
Add yours