ಉದ್ಯೋಗಕ್ಕಾಗಿ ನೇರ ಸಂದರ್ಶನ
Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮಾರ್ಚ್ 16ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಮಾರ್ಚ್ 12ರಂದು ನಿಷೇದಾಜ್ಞೆ; ಜಿಲ್ಲಾಧಿಕಾರಿ ಆದೇಶ
ಸಂದರ್ಶನವು ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ 18 ರಿಂದ 35 ವರ್ಷದೊಳಗಿನ ಬಿಎಸ್‍ಸಿ, ಎಂಎಸ್‍ಸಿ, ಬಿ-ಫಾರ್ಮ, ಎಂ-ಫಾರ್ಮಸಿ, ಐಟಿಐ ಮತ್ತು ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0816-2278488ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours