ಕೊರಟಗೆರೆ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkurnews
ಕೊರಟಗೆರೆ; ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ ಹಾಗೂ 10ಸಹಾಯಕಿಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗೌರವಧನ ಆಧಾರ ಮೇಲೆ ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಏಪ್ರಿಲ್ 5ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸ್ತ್ರೀಶಕ್ತಿ ಭವನ, ಕೊರಟಗೆರೆ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 08138-232315ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಯಲಚಿಗೆರೆ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಹುದ್ದೆಯು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.
ಟಿ.ಎಂ.ಬಿ.ಕೆ.ಕಾಲೋನಿ, ಚಿಕ್ಕಸಾಗ್ಗೆರೆ, ಕುರುಡುಗೋನಹಳ್ಳಿ, ಸಿಂಗ್ರಿಹಳ್ಳಿ, ಹೊಸಕೋಟೆ-2, ಗಡ್ಡೋಬನಹಳ್ಳಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳು ಸಾಮಾನ್ಯ ವರ್ಗಕ್ಕೆ; ಮಾದೇನಹಳ್ಳಿ+ಅಗ್ರಹಾರ ತಾಂಡ, ಓಬಳದೇವರಹಳ್ಳಿ, ಬಸವನಹಳ್ಳಿ ಕೇಂದ್ರದ ಸಹಾಯಕಿ ಹುದ್ದೆಗಳು ಪ.ಜಾತಿಗೆ ಹಾಗೂ ಹಂಚಿಹಳ್ಳಿ ಕೇಂದ್ರದ ಸಹಾಯಕಿ ಹುದ್ದೆಯು ಪ.ಪಂಗಡಕ್ಕೆ ಮೀಸಲಿಡಲಾಗಿದೆ.
+ There are no comments
Add yours