ಉದ್ಯೋಗಕ್ಕಾಗಿ ನೇರ ಸಂದರ್ಶನ
Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಎಲ್ ಅಂಡ್ ಟಿ ಫೈನಾನ್ಶಿಯಲ್ ಸರ್ವೀಸಸ್ ಹಾಗೂ ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮಾರ್ಚ್ 21ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಸಂದರ್ಶನವು ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ 18 ರಿಂದ 30 ವರ್ಷದೊಳಗಿನ ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816-2278488ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours