https://chat.whatsapp.com/Haj1IrKLgZpAIglCBfQbtB" alt="" width="397" height="133" />
Tumkurnews
ತುಮಕೂರು; ಲಂಚ ಸ್ವೀಕಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬೆಂಗಳೂರಿನ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಡಾಳ್ ವಿರೂಪಾಕ್ಷಪ್ಪ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಆದರೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಲೋಕಾಯುಕ್ತ ಪೊಲೀಸರು ಕೋರ್ಟ್ ಮೊರೆ ಹೋಗಿದ್ದು, ಜಾಮೀನು ರದ್ದು ಮಾಡುವಂತೆ ಮನವಿ ಮಾಡಿದ್ದರು. ಇಂದು ನಿರೀಕ್ಷಣಾ ಜಾಮೀನು ರದ್ದುಗೊಂಡಿತ್ತು, ಅದರ ಬೆನ್ನಲ್ಲೇ ಶಾಸಕರ ಬಂಧನವಾಗಿದೆ.
ಶಾಸಕ ಸ್ಥಾನಕ್ಕೆ ಎಸ್.ಆರ್ ಶ್ರೀನಿವಾಸ್ ರಾಜೀನಾಮೆ
+ There are no comments
Add yours