ಫೋಟೋಗ್ರಫಿ, ವಿಡಿಯೋಗ್ರಫಿ ಕಲಿಯಬೇಕೆ?; ಇಲ್ಲಿದೆ ಉಚಿತ ತರಬೇತಿ

1 min read

 

ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

Tumkurnews
ತುಮಕೂರು; ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ಊಟ ಮತ್ತು ವಸತಿಯೊಂದಿಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ವ್ಯಾಪ್ತಿಯ ಕನ್ನಡ ಓದಲು ಹಾಗೂ ಬರೆಯಲು ಬರುವಂತಹ 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಏಪ್ರಿಲ್ 8ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ(ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ), ತುಮಕೂರು-572104 ಅಥವಾ ದೂ.ವಾ.ಸಂ. 0816-2243386, ಮೊ.ಸಂ.9449173386, 9738351048ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

About The Author

You May Also Like

More From Author

+ There are no comments

Add yours