ಮಧುಗಿರಿ; 18 ವರ್ಷದ ಯುವತಿ ನಾಪತ್ತೆ

1 min read

 

ಯುವತಿ ಕಾಣೆ
Tumkurnews
ತುಮಕೂರು; ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋನಿಯಾ ಜೆ.ಡಿ. ಎಂಬ 18 ವರ್ಷದ ಯುವತಿಯು ಫೆಬ್ರವರಿ 2ರಂದು ಮಧ್ಯಾಹ್ನ 3 ಗಂಟೆಯಿಂದ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ.
ಈಕೆಯು 152 ಸೆಂ.ಮೀ. ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮತ್ತು ತೆಲುಗು ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಕೇಸರಿ ಬಣ್ಣದ ಟಾಪ್, ಕೆಂಪು ಬಣ್ಣದ ಪ್ಯಾಂಟ್ ಧರಿಸಿದ್ದಳು.
ಈಕೆಯ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ದೂ.ವಾ.ಸಂ. 08137-279534/ 282313/ 282381ನ್ನು ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಮನವಿ ಮಾಡಿದ್ದಾರೆ.

About The Author

You May Also Like

More From Author

+ There are no comments

Add yours