ಚಿಕ್ಕಮಗಳೂರು; ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ ತಮ್ಮಯ್ಯ ವಿರುದ್ಧ ಸಿ.ಟಿ ರವಿ ಸೋಲುಂಡಿದ್ದಾರೆ. ಸೋಲಿನ ಬೆನ್ನಲ್ಲೇ ಸಿ.ಟಿ ರವಿ ಅವರು ಮತದಾರರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ‘ಜನತೆ ನೀಡಿದ ಜನಾದೇಶಕ್ಕೆ ತಲೆಬಾಗುತ್ತೇನೆ. ಸೋಲು ಗೆಲುವು ಸ್ವಾಭಾವಿಕ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.
+ There are no comments
Add yours