ಪ್ರದೀಪ್ ಈಶ್ವರ್ ಪ್ರಮಾಣ ವಚನ ಸ್ವೀಕಾರ
Tumkurnews
ಬೆಂಗಳೂರು; ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರುಗಳು ಸೋಮವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ನಡೆದಾಡುವ ದೇವರು ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮಾಜಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ
ರಾಜ್ಯದ ಗಮನ ಸೆಳೆದಿರುವ ಪ್ರದೀಪ್ ಈಶ್ವರ್ ಅವರು ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಯಾಗಿದ್ದಾರೆ.
ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ; ಸಿಎಂ ಗಾದಿಗೆ ಮತ್ತಷ್ಟು ಹತ್ತಿರ
+ There are no comments
Add yours