ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
Tumkurnews
ತುಮಕೂರು: ತಾಲ್ಲೂಕಿನ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಖಾಲಿಯಿರುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಮ್ಮಸಂದ್ರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ.
ಬಿ.ಎ, ಬಿ.ಎಸ್ಸಿ,ಬಿ.ಇಡಿ,ಬಿ ಪಿ ಇಡಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ-1, ಇಂಗ್ಲೀಷ್-2, ಹಿಂದಿ-1, ಸಮಾಜ ವಿಜ್ಞಾನ-1 ಹಾಗೂ ದೈಹಿಕ ಶಿಕ್ಷಣ-1 ಈ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ತಮ್ಮ ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 5ರೊಳಗಾಗಿ ಹತ್ತಿರದ ವಸತಿ ಶಾಲೆಗಳಿಗೆ ಅಥವಾ kreiskrcrs0408@gmail.com ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9880056870, 9986779693, 9591049218ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.




+ There are no comments
Add yours