ಚೇಳೂರು, ಹೊಸಕೆರೆ, ಹಾಗಲವಾಡಿ, ನಂದಿಹಳ್ಳಿ; ಈ 11 ದಿನ ವಿದ್ಯುತ್ ವ್ಯತ್ಯಯ

1 min read

 

ವಿದ್ಯುತ್ ವ್ಯತ್ಯಯ
Tumkurnews
ತುಮಕೂರು; ಕವಿಪ್ರನಿನಿ ಬೃಹತ್ ಕಾಮಗಾರಿ ವಿಭಾಗದ ವತಿಯಿಂದ ಟವರ್’ಗಳ ನಿರ್ಮಾಣ ಕಾರ್ಯ ಹಾಗೂ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಚೇಳೂರು, ಹೊಸಕೆರೆ, ಹಾಗಲವಾಡಿ ಮತ್ತು ನಂದಿಹಳ್ಳಿ ಉಪಸ್ಥಾವರಗಳ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಜೂನ್ 5, 7, 9, 11, 13, 15, 17, 19, 21, 23 ಹಾಗೂ 25ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ.

About The Author

You May Also Like

More From Author

+ There are no comments

Add yours