ಐಟಿಐ ದಾಖಲಾತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ
Tumkurnews
ತುಮಕೂರು; ತುರುವೇಕೆರೆ ವೈ.ಟಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಅಮ್ಮಸಂದ್ರ ಹಡವನಹಳ್ಳಿಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಪಿಟ್ಟರ್, ಎಲೆಕ್ಟ್ರೀಷಿಯನ್, ವೆಲ್ಡರ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಕೋಪಾ, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್, ಸಿಎನ್‍ಸಿ ಮೆಷಿನಿಂಗ್ ದಾಖಲಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಪಿಯುಸಿ ಉತ್ತೀರ್ಣ, ಅನುತ್ತೀರ್ಣರಾದ ಅಭ್ಯರ್ಥಿಗಳು ಜಾಲ ತಾಣ www.cite.karnataka.gov.in ಮೂಲಕ ಜೂನ್ 9ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9743539690/ 8884069548/ 9482929710/ 9449926855/ 9980129515ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours