ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

Tumkurnews
ತುಮಕೂರು; ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಇಲ್ಲಿ ನೊಂದಾಯಿಸಿಕೊಂಡಿರುವ ತುಮಕೂರು ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗಾಗಿ ಮಾತ್ರ 2023-24ನೇ ಸಾಲಿನ ವಿಶೇಷ ಘಟಕ ಯೋಜನೆಯಡಿಯಲ್ಲಿ 5 ಕುರಿ, ಮೇಕೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ 2 ಕುರಿ, ಮೇಕೆ ಘಟಕಗಳನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ವಯೋಮಿತಿ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ನಮೂನೆಗಳನ್ನು ಆಯಾ ತಾಲ್ಲೂಕಿನ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ನಿಯಮಿತ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 21ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ತುಮಕೂರು; ಈ 8 ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಡಿ; ಇಲಾಖೆ

About The Author

You May Also Like

More From Author

+ There are no comments

Add yours