ಕುಡಿಯುವ ನೀರು ಪೂರೈಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಕುಡಿಯುವ ನೀರು ಪೂರೈಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ

Tumkurnews
ತುಮಕೂರು; ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಜನರಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸುವ ಸಂಬಂಧ ಭೂವಿಜ್ಞಾನಿಗಳ ಮೂಲಕ ನೀರಿನ ಪಾಯಿಂಟ್ ಗುರುತಿಸಿ, ಕೊಳವೆ ಬಾವಿ ಕೊರೆಸಿ ಜನರಿಗೆ ನೀರು ಪೂರೈಸುವಂತೆ ಎಲ್ಲಾ ತಹಶೀಲ್ದಾರ್, ಇಓಗಳು ಮತ್ತು ಮುಖ್ಯಾಧಿಕಾರಿಗಳಿಗೆ ತಿಳಿಸಿದರು.
ಪ್ರತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ 5 ಎಕರೆ ಜಮೀನನ್ನು ಆಶ್ರಯ ಯೋಜನೆಗೆ ಗುರುತಿಸಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.
ಎಲ್ಲ ಸರ್ಕಾರಿ ಶಾಲೆಗಳಿಗೆ ಖಾತೆಗಳನ್ನು ಮಾಡಿಕೊಡುವ ಸಂಬಂಧ ತಹಶೀಲ್ದಾರ್ ಮತ್ತು ಬಿಇಓಗಳು ತಡ ಮಾಡದೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಜಿಪಂ ಸಿಇಓ ಜಿ.ಪ್ರಭು ಮಾತನಾಡಿ, ನೀರಿನ ಕೊರತೆ ಇರುವ ಗ್ರಾಮಗಳಲ್ಲಿ ಬೋರ್‍ವೆಲ್ ಕೊರೆಸಲು ಅಂತರ್ಜಲ ಲಭ್ಯವಿಲ್ಲದಿದ್ದಲ್ಲಿ ಪಕ್ಕದ ಗ್ರಾಮಗಳಲ್ಲಿ ಅಂತರ್ಜಲ ಮೂಲವನ್ನು ಗುರುತಿಸಿ ಪೈಪ್‍ಲೈನ್ ಹಾಕಿಸಿ ನೀರು ಪೂರೈಸಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಕಂಟಿನ್‍ಜೆನ್ಸಿ ಆ್ಯಕ್ಷನ್ ಪ್ಲ್ಯಾನ್ ಮಾಡುವ ಮೂಲಕ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳಬೇಕು, ತಕ್ಷಣವೇ ಸಿಇಓ ಹಾಗೂ ಎಂಎಲ್‍ಎ ನೇತೃತ್ವದ ಟಾಸ್ಕ್ ಪೋರ್ಸ್ ಸಮಿತಿ ಸಭೆಗಳನ್ನು ಕರೆದು ಖಾಸಗಿ ಕೊಳವೆ ಬಾವಿ ಜಲಮೂಲಗಳು ಇರುವ ಕಡೆ ಸರ್ಕಾರದ ವತಿಯಿಂದ ಖಾಯಂ ಕೊಳವೆಬಾವಿ ಕೊರೆಸಬೇಕೆಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಬಗರ್ ಹುಕುಂ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಕ್ಷೇತ್ರದ ಶಾಸಕರೊಂದಿಗೆ ಸಮಾಲೋಚಿಸಿ ಪ್ರಸ್ತಾವನೆಗಳನ್ನು ಕಳುಹಿಸಿಕೊಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳೊಂದಿಗೆ ಭೂಮಿ ಫೆಂಡನ್ಸಿ, ಆರ್’ಐ ವ್ಯಾಜ್ಯ, ತಹಶೀಲ್ದಾರ್ ನ್ಯಾಯಾಲಯ ಪ್ರಕರಣಗಳು, ಜೆಸ್ಲಿಪ್, 3 ಮತ್ತು 9 ಮಿಸ್ ಮ್ಯಾಚ್, ಮೋಜಿಣಿ ತಿದ್ದುಪಡಿ, ಆರ್‍ಟಿಸಿ ಇಂಡೀಕರಣ, ಕಂದಾಯ ಗ್ರಾಮ, ಪಿಂಚಣಿ ಮುಂತಾದ ಕಂದಾಯ ಇಲಾಖೆಯ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು.

About The Author

You May Also Like

More From Author

+ There are no comments

Add yours