ಆರೋಗ್ಯ ಇಲಾಖೆಯಲ್ಲಿ ಉದ್ಯೋಗ; ಆಕಾಂಕ್ಷಿಗಳಿಗೆ ಶುಭ ಸುದ್ದಿ

1 min read

 

ಆರೋಗ್ಯ ಇಲಾಖೆಯಲ್ಲಿ ಉದ್ಯೋಗ!; ಗುಡ್ ನ್ಯೂಸ್ ಇಲ್ಲಿದೆ

Tumkurnews
ತುಮಕೂರು; ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕೆಂಬ ಆಕಾಂಕ್ಷೆ ಇರುವವರಿಗೆ ಆರೋಗ್ಯ ಸಚಿವರಿಂದ ಶುಭ ಸುದ್ದಿ ದೊರೆತಿದೆ. ಸಿಬ್ಬಂದಿ ಕೊರತೆ ಕುರಿತು ಶೀಘ್ರವೇ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರೊಂದಿಗೆ ಚರ್ಚಿಸಿ ಸಿಬ್ಬಂದಿ ಕೊರತೆ ನೀಗಿಸಲು ಪ್ರಯತ್ನಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದ ಜಿಲ್ಲಾ ಆಸ್ಪತ್ರೆಗೆ ಇಂದು ಭೇಟಿ ನೀಡಿ, ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದ ನಂತರ ವೈದ್ಯಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಹೊಸ ತಂತ್ರಜ್ಞಾನ ಆಧಾರಿತ, ಟ್ಯ್ರಾಕಿಂಗ್ ವ್ಯವಸ್ಥೆಯುಳ್ಳ 108 ಆಂಬುಲೆನ್ಸ್ ಸೇವೆಯನ್ನು ಶೀಘ್ರವೇ ರಾಜ್ಯದಾದ್ಯಂತ ವಿಸ್ತರಿಸಲಾಗುವುದು. 262 ಹೊಸ 108 ಆಂಬುಲೆನ್ಸ್ ವಾಹನಗಳನ್ನು ಖರೀದಿ ಮಾಡಲಾಗಿದ್ದು, ಒಟ್ಟು 750 ಆಂಬುಲೆನ್ಸ್ ವಾಹನಗಳು ಸೇವೆಯಲ್ಲಿ ಇರಲಿದೆ. ಅಂತೆಯೇ ಮೆಡಿಕಲ್ ಮೊಬೈಲ್ ಯುನಿಟ್, 104 ಕಾಲ್ ಸೆಂಟರ್ ವ್ಯವಸ್ಥೆ, ಆಸ್ಪತ್ರೆಗಳಿಗೆ ಸಕಾಲದಲ್ಲಿ ಔಷಧ ಪೂರೈಕೆ ಮುಂತಾದ ಸುಧಾರಣಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಸ್ಥಳೀಯವಾಗಿ ಸಿಬ್ಬಂದಿ ನೇಮಕ ಮಾಡುವ ಅಧಿಕಾರವಿದ್ದಲ್ಲಿ ಶೀಘ್ರವೇ ನೇಮಕಾತಿ ಮಾಡುವಂತೆ ಮತ್ತು ಅವಶ್ಯಕತೆ ಇಲ್ಲದ ಕಡೆ ಇರುವ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು ಅವಶ್ಯಕತೆ ಇರುವ ಕಡೆ ವರ್ಗಾಯಿಸಿ ವೈದ್ಯರ ಕೊರತೆ ನೀಗಿಸಿಕೊಳ್ಳುವಂತೆ ಸೂಚಿಸಿದರು.

ಸಿದ್ದಾರ್ಥ ಸೂಪರ್ ಸ್ಪೆಷಾಲಿಟಿ OPD ಹಾಗೂ ಸಿಬ್ಬಂದಿ ವಸತಿ ಗೃಹ ಉದ್ಘಾಟನೆ

About The Author

You May Also Like

More From Author

+ There are no comments

Add yours