ಸಿದ್ದಾರ್ಥ ಸೂಪರ್ ಸ್ಪೆಷಾಲಿಟಿ OPD ಹಾಗೂ ಸಿಬ್ಬಂದಿ ವಸತಿ ಗೃಹ ಉದ್ಘಾಟನೆ

1 min read

ಸೂಪರ್ ಸ್ಪೆಷಾಲಿಟಿ ಹೊರ ರೋಗಿ ವಿಭಾಗ ಹಾಗೂ ಸಿಬ್ಬಂದಿ ವಸತಿ ಗೃಹ ಸಮುಚ್ಚಯದ ಉದ್ಘಾಟನೆ

Tumkurnews
ತುಮಕೂರು; ವೈದ್ಯಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿದ್ದು, ಜನರ ಸೇವೆ ಮಾಡುವುದೇ ವೈದ್ಯರ ಪ್ರಥಮ ಆದ್ಯತೆಯಾಗಬೇಕು. ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು. ಜನರ ಜೀವನವನ್ನು ಬದಲಾಯಿಸುವ ಶಕ್ತಿ ವೈದ್ಯರಿಗೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅಭಿಪ್ರಾಯ ಪಟ್ಟರು.
ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೂಪರ್ ಸ್ಪೆಷಾಲಿಟಿ ಹೊರ ರೋಗಿ ವಿಭಾಗ ಹಾಗೂ ಸಿಬ್ಬಂದಿ ವಸತಿ ಗೃಹ ಸಮುಚ್ಚಯದ ಉದ್ಘಾಟನೆ ನೆರವೇರಿಸಿ, ನಂತರ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗೃಹ ಲಕ್ಷ್ಮಿಗೆ ಚಾಲನೆ; ನೋಂದಣಿಗೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ
ಯಾವುದೇ ಅಭಿವೃದ್ದಿ ಹೊಂದುತ್ತಿರುವ ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆ ಅತಿ ಮುಖ್ಯವಾಗುತ್ತದೆ. ಯಾವುದೇ ದೇಶದ ಅಥವಾ ರಾಜ್ಯದ ಆರೋಗ್ಯ ಮತ್ತು ಶೈಕ್ಷಣಿಕ ವಲಯ ಅತ್ಯುತ್ತಮವಾಗಿದ್ದಲ್ಲಿ ಆ ದೇಶವನ್ನು ಅಭಿವೃದ್ದಿ ಹೊಂದಿದ ದೇಶವೆಂದು ಪರಿಗಣಿಸಬಹುದಾಗಿದೆ.
ಸಮಾಜದ ಸಾಮಾನ್ಯ ಮನುಷ್ಯನಿಗೂ ಸಹ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆಗಳು ದೊರಕಬೇಕು ಎಂಬುವುದೇ ತಮ್ಮ ಆಶಯವಾಗಿದೆ ಎಂದ ಅವರು, ವೈದ್ಯ ವೃತ್ತಿ ಅತ್ಯಂತ ಪವಿತ್ರ ಹಾಗೂ ಉತ್ತಮ ವೃತ್ತಿಯಾಗಿದೆ. ಜನರ ಸೇವೆಯೇ ದೇಶ ಸೇವೆಯಾಗಿದ್ದು, ಈ ಮೂಲಕ ವೈದ್ಯರು ರಾಷ್ಟ್ರ ಸೇವೆಗೆ ತಮ್ಮನ್ನು ತಾವು ಮುಡುಪಾಗಿಡಬೇಕು. ಜನರ ಜೀವನದ ಮೇಲೆ ಪ್ರಭಾವ ಬೀರುವ, ಬದುಕನ್ನು ಬದಲಾಯಿಸುವ ಶಕ್ತಿ ವೈದ್ಯಕೀಯ ಲೋಕಕ್ಕಿದೆ. ಬಡ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡಿದಾಗ ಅವರನ್ನು ನಗು ಮುಖದಿಂದ ಮಾತನಾಡಿಸಿ ಉತ್ತಮ ಚಿಕಿತ್ಸೆ ನೀಡಿ ಗುಣಮುಖರಾಗಿ ಕಳುಹಿಸುವ ನಿಟ್ಟಿನಲ್ಲಿ ವೈದ್ಯರುಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಅಣಬೆ ಬೇಸಾಯ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಶ್ರೀ ಸಿದ್ಧಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ ಸಕಲ ಆಧುನಿಕ ವೈದ್ಯಕೀಯ ಸೌಲಭ್ಯ ಹಾಗೂ ಹಚ್ಚ ಹಸಿರಿನ ವಾತಾವರಣವನ್ನೊಳಗೊಂಡ ಅತ್ಯುತ್ತಮ ಸಂಸ್ಥೆಯಾಗಿದೆ ಎಂದು ಶ್ಲಾಘಿಸಿದರು. ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ: ಜಿ. ಪರಮೇಶ್ವರ್, ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ನೀಡುವಲ್ಲಿ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಸುಮಾರು ಎರಡೂವರೆ ಸಾವಿರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು ಗ್ರಾಮೀಣ ಜನರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಚಿಕಿತ್ಸೆಯನ್ನು ಕಡಿಮೆ ಖರ್ಚಿನಲ್ಲಿ ನೀಡುವುದು ಸಿದ್ಧಾರ್ಥ ಸಂಸ್ಥೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ವೈದ್ಯರು ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರು ಯಾವುದೇ ರೀತಿಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಹೋದರೆ ಕನಿಷ್ಠ 5ಲಕ್ಷ ಹಣ ಖರ್ಚಾಗುತ್ತದೆ. ನಮ್ಮ ಸಂಸ್ಥೆಯಲ್ಲಿ ಕಡಿಮೆ ಖರ್ಚಿನಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಮಾಜಿ ಪ್ರಧಾನಿ ಡಾ: ಮನಮೋಹನ್ ಸಿಂಗ್ ಅವರು ರಾಷ್ಟ್ರೀಯ ಆರೋಗ್ಯ ನೀತಿಯನ್ನು ಜಾರಿಗೆ ತಂದ ಪರಿಣಾಮ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳು ಆಗಿದ್ದು, ಪ್ರತಿ ಸಾವಿರ ಮಕ್ಕಳಿಗೆ 55ರಷ್ಟಿದ್ಧ ಶಿಶು ಮರಣ ಪ್ರಕರಣಗಳು 30ಕ್ಕೆ ಇಳಿದಿರುವುದು ಕ್ರಾಂತಿಕಾರಕ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಉಪ ಕುಲಪತಿ ಕೆ.ವಿ. ಲಿಂಗೇಗೌಡ, ಕುಲಸಚಿವ ಕುರಿಯಾನ್, ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ್ ಸಾನಿಕೊಪ್ಪ, ಸಿದ್ದಾರ್ಥ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪೂರ್‍ವಾಡ್ ಮತ್ತಿತರರು ಉಪಸ್ಥಿತರಿದ್ದರು.

ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೆ? ಮನೆಗೆ ಬರಲಿದ್ದಾರೆ ಅಧಿಕಾರಿಗಳು! ಇಲ್ಲಿದೆ ಮಾಹಿತಿ

About The Author

You May Also Like

More From Author

+ There are no comments

Add yours