ಭೂಮಿ ಸಂಬಂಧಿತ ಪ್ರಕರಣಗಳಿಗೆ ಶೀಘ್ರ ಪರಿಹಾರ ಒದಗಿಸಿ; ಶಿವಾನಂದ ಬಿ.ಕರಾಳೆ

1 min read

ಭೂ ವ್ಯಾಜ್ಯಗಳು ಇನ್ನಾದರೂ ಬಗೆಹರಿಯುತ್ತಾ; ಫಲಿಸುತ್ತಾ ಎಡಿಸಿ ಸಭೆ

Tumkurnews
ತುಮಕೂರು: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬಾಕಿ ಇರುವ ಭೂಮಿಗೆ ಸಂಬಂಧಿಸಿದ ಪ್ರಕರಣಗಳಿಗೆ ಶೀಘ್ರ ಪರಿಹಾರ ಒದಗಿಸಿ, ವಿಲೇವಾರಿ ಮಾಡಿ, ಮುಂದಿನ ವಾರದ ಸಭೆಯೊಳಗೆ ಭೌತಿಕ ವರದಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹಲಕ್ಷ್ಮೀ; ತುಮಕೂರು ಜಿಲ್ಲೆಯಲ್ಲಿ ನೋಂದಣಿ ಯಾವಾಗ? ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ
ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೀಡಿಯೋ ಕಾನ್ಪೆರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಭೂವಿವಾದ ಸಂಬಂಧಿತ ಪ್ರಕರಣ ಹಾಗೂ ಬಾಕಿ ಉಳಿದಿರುವ ಪಹಣಿಯಲ್ಲಿನ ಕಾಲಂ 3 ಮತ್ತು ಕಾಲಂ 9 ತಾಳೆ ಆಗುತ್ತವೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳುವುದು ಮತ್ತು ಲೋಪಗಳು ಕಂಡು ಬಂದಿರುವ ಪ್ರಕರಣಗಳನ್ನು ಗುರುತಿಸಿ ವಿಲೇ ಮಾಡಲು ಆದೇಶ ಹೊರಡಿಸಿ ನಿಯಮಾನುಸಾರ ಕ್ರಮ ಕೈಗೊಂಡು, ಮುಂದಿನ ವಾರದ ವೀಡಿಯೋ ಕಾನ್ಪೆರೆನ್ಸ್ ಸಭೆಯಷ್ಟರಲ್ಲಿ ಜಿಲ್ಲೆಯಲ್ಲಿ 6 ಮಾಹೆಗಳಿಗಿಂತ ಮೇಲ್ಪಟ್ಟು ಬಾಕಿ ಇರುವ ಎಲ್ಲಾ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ, ವಿಲೇವಾರಿ ಮಾಡಿ, ಸಮಗ್ರ ಮಾಹಿತಿ ಹೊಂದಿದ ಭೌತಿಕ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಯಾವುದೇ ಬಗೆಹರಿಸಲಾಗದ ಸಮಸ್ಯೆ ಇದ್ದಲ್ಲಿ, ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಇದರಿಂದ ಸಮಸ್ಯೆಗಳು ಶೀಘ್ರ ಬಗೆಹರಿದು ಸಾರ್ವಜನಿಕರಿಗೆ ಉಪಯೋಗ ಆಗಲಿದೆ ಎಂದರು.

ರೋಗಿಗಳಿಗೆ ಹೊರಗಿನಿಂದ ಔಷಧಿ ಖರೀದಿಸುವಂತೆ ಸೂಚಿಸಬಾರದು; ಸಚಿವ ಗುಂಡೂರಾವ್
ಅನಧಿಕೃತ ಸಾಗುವಳಿಗೆ ಸಂಬಂಧಿಸಿದಂತೆ ಸಕ್ರಮಗೊಳಿಸಿದ ಅರ್ಜಿಗಳಲ್ಲಿ ಸಾಗುವಳಿ ಚೀಟಿ ನೀಡಲು ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ವರದಿ ಸಲ್ಲಿಸಬೇಕು. ಪಿಂಚಣಿದಾರರ ಖಾತೆಗೆ ಆಧಾರ್ ಲಿಂಕ್, ಇಕೈವೆಸಿ ಸಂಬಂಧಿಸಿದಂತಹ ಸಮಸ್ಯೆಗಳನ್ನು ಬಗೆಹರಿಸಿ, ವಿಕಲಚೇತನರಿಗೆ, ವಿಧವೆಯರಿಗೆ, ವೃದ್ಧರಿಗೆ ನೀಡಲಾಗುತ್ತಿರುವ ಪಿಂಚಣಿ ಸರಿಯಾಗಿ ಸೇರುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದರು.
ಸ್ಥಳೀಯ ಸಂಸ್ಥೆಗಳು ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಆಟೋ ಚಾಲಕರ ಸಂಘ ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಭೆ ನಡೆಸಿ ಅವರಿಗೆ ಇ-ಶ್ರಮ್ ಕಾರ್ಡ್ ವಿತರಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ನಂಜಯ್ಯ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಸೇರಿದಂತೆ ಮೊದಲಾದ ಅಧಿಕಾರಿಗಳು ಪ್ರಗತಿ ವರದಿಗಳ ಪ್ರಸ್ತುತಪಡಿಸಿ ಮಾತನಾಡಿದರು. ಶಿಕ್ಷಣ ಇಲಾಖೆ ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಭೂ ಮಂಜೂರಾತಿ ಬಾಕಿ ಪ್ರಕರಣಗಳನ್ನು ಪೂರ್ಣಗೊಳಿಸಿ ಕ್ರಿಯಾ ಯೋಜನೆಯನ್ನು ಕಳಿಸಲು ಸೂಚಿಸಿದರು.
ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ನಿಗಮಗಳು ಸಾರ್ವಜನಿಕರಿಗೆ ಒದಗಿಸುವ ಸಾಲ-ಸಹಾಯಧನ, ಪಿಂಚಣಿ ಪಾವತಿ, ವಿದ್ಯಾಸಿರಿ, ಗಂಗಾ ಕಲ್ಯಾಣ, ವಿದ್ಯಾರ್ಥಿವೇತನ, ಪಿಎಂ ಕಿಸಾನ್, ಪ್ರೋತ್ಸಾಹಧನ, ಪೋಡಿ ಪ್ರಕರಣ ಇತ್ಯರ್ಥ, ರಸ್ತೆ, ವಸತಿ ಸೌಲಭ್ಯ, ಹಾನಿಯಾದ ಮನೆಗಳಿಗೆ ಪರಿಹಾರ, ವಿದ್ಯುತ್ ಸಂಪರ್ಕ, ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಪರಿಶೀಲಿಸಿ ತ್ವರಿತವಾಗಿ ಮಂಜೂರು ಮಾಡುವಂತೆ ಸೂಚಿಸಿದರು.
ಎಲ್ಲಾ ಕಚೇರಿಗಳು ಇ-ಆಫೀಸ್ ಮೂಲಕ ಕಡತ ಸಲ್ಲಿಸಲು ಅಗತ್ಯ ಸಿದ್ದತೆ ಮಾಡಿಕೊಂಡು, ಇ-ಆಫೀಸ್ ಮೂಲಕ ಎಲ್ಲಾ ಕಡತಗಳನ್ನು ಸಲ್ಲಿಸಬೇಕು. ಇದರಿಂದ ತ್ವರಿತವಾಗಿ ಕಡತಗಳು ಇತ್ಯರ್ಥವಾಗಲಿದೆ ಎಂದರು.

ಅಣಬೆ ಬೇಸಾಯ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಜಿಲ್ಲೆಯ ಎಲ್ಲಾ ಮುಜರಾಯಿ ದೇವಸ್ಥಾನಗಳ ಸರ್ವೇ ಕಾರ್ಯ ಪೂರ್ಣಗೊಳಿಸಿ ಒತ್ತುವರಿಯಾಗಿರುವ ಜಾಗವನ್ನು ತ್ವರಿತವಾಗಿ ವಶಕ್ಕೆ ಪಡೆಯಬೇಕು. ಪೋಡಿ ವಿಭಜನೆ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಮುಂದಿನ 15 ದಿನಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಉಪವಿಭಾಗಾಧಿಕಾರಿ ರಿಷಿಆನಂದ್, ಕಲ್ಪಶ್ರೀ, ತುಮಕೂರು ತಾಲೂಕು ತಹಸೀಲ್ದಾರ್ ಸಿದ್ದೇಶ್, ಚಿಕ್ಕನಾಯಕನಹಳ್ಳಿ ತಾಲೂಕು ತಹಸೀಲ್ದಾರ್ ಅರ್ಚನಾ, ಎಡಿಎಲ್‍ಆರ್ ಶಿವಶಂಕರ್, ಶಿರಸ್ತೆದಾರ್ ಎನ್. ನರಸಿಂಹರಾಜು ಸೇರಿದಂತೆ ತಹಸೀಲ್ದಾರ್‍ಗಳು, ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಆರೋಗ್ಯ ಇಲಾಖೆಯಲ್ಲಿ ಉದ್ಯೋಗ; ಆಕಾಂಕ್ಷಿಗಳಿಗೆ ಶುಭ ಸುದ್ದಿ

About The Author

You May Also Like

More From Author

+ There are no comments

Add yours