ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ
Tumkurnews
ತುಮಕೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ಸಾಮನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಸಲು ಆಗಸ್ಟ್ 16, 2023 ಕಡೆಯ ದಿನವಾಗಿದ್ದು, ವಿದ್ಯಾರ್ಥಿಗಳು https://shp.karnataka.gov.in ಅನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostel so Karnataka.gov.in ಮುಖಾಂತರ ಅಥವಾ ಜಿಲ್ಲಾ ಅಧಿಕಾರಿಗಳು, ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:8050770005ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours