ರಸ್ತೆ ಅಪಘಾತದಲ್ಲಿ ಪ್ರಾಣ ಹಾನಿ; ರಾಜ್ಯದಲ್ಲಿ ತುಮಕೂರು ಟಾಪ್!
Tumkurnews
ತುಮಕೂರು; ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಬುಧವಾರ ತುಮಕೂರಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳ ಕುರಿತು ಮಾಹಿತಿ ಪಡೆದರು.
ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಪುರವಾಡ್ ಅವರೊಂದಿಗೆ ರಾ.ಹೆ 48ರ ವೀಕ್ಷಣೆ ನಡೆಸಿದ ಅಲೋಕ್ ಕುಮಾರ್, ಸದರಿ ರಸ್ತೆಯಲ್ಲಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮ ಜರುಗಿಸುವುದಾಗಿ ತಿಳಿಸಿದರು.
ತುಮಕೂರು ಟಾಪ್!;
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದೊಂದು ವರ್ಷದಲ್ಲಿ 762 ಮಂದಿ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಇಡೀ ರಾಜ್ಯದಲ್ಲಿ ತುಮಕೂರು ಹಾಗೂ ಬೆಂಗಳೂರು ನಗರವು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆಯಲ್ಲಿ ರಾಜ್ಯದಲ್ಲೇ ಟಾಪ್ ಸ್ಥಾನದಲ್ಲಿದೆ. ಈ ಮರಣ ಪ್ರಮಾಣವನ್ನು ತಗ್ಗಿಸಲು ಕ್ರಮ ವಹಿಸುತ್ತಿರುವುದಾಗಿ ಅಲೋಕ್ ಕುಮಾರ್ ಅವರು ತಿಳಿಸಿದರು.
ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಸಮ್ಮತಿ
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours