ಕೊರಟಗೆರೆ; ಜಿಪಂ ಸಿಇಒ ದಿಢೀರ್ ಭೇಟಿ; ಪರಿಶೀಲನೆ
Tumkurnews
ತುಮಕೂರು: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಕೊರಟಗೆರೆ ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್, ಶುದ್ದ ಕುಡಿಯುವ ನೀರಿನ ಘಟಕ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು.
ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿಗಳೊಂದಿಗೆ ಗ್ರಾಮ ಪಂಚಾಯಿತಿಯಲ್ಲಿ ಆಗಿರುವಂತಹ ಪ್ರಗತಿಗಳ ಬಗ್ಗೆ ಚರ್ಚಿಸಿದರು. ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವಂತಹ ಪ್ರಗತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಇಓ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪ್ರತೀ ಗ್ರಾಮ ಗ್ರಾಮದ ರೈತರ ಮನವೊಲಿಸಿ ಕನಿಷ್ಟ 500 ವೈಯಕ್ತಿಕ ಕಾಮಗಾರಿಗಳ ಪಟ್ಟಿಯನ್ನು ನೀಡುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮನವಿ ಮಾಡಿದರು.
ಗ್ರಾಮ ಪಂಚಾಯಿತಿಯನ್ನು ಹೆಚ್ಚು ಬಲಪಡಿಸಬೇಕಾದರೆ, ಹೆಚ್ಚು ಹೆಚ್ಚು ವೈಯಕ್ತಿಕ ಕಾಮಗಾರಿಗಳನ್ನು ಮೊದಲು ಮಾಡಬೇಕು. ಆನಂತರದಲ್ಲಿ ಶೇ.60:40ರ ಅನುಪಾತದಂತೆ ಇತರೆ ಸಮುದಾಯ ಕಾಮಗಾರಿಗಳನ್ನು ಕೈಗೊಳ್ಳಬೇಕು. ಯಾವುದೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಹೊಂದಬೇಕಾದರೆ, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳು, ಅಂಗನವಾಡಿ ಕಟ್ಟಡಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಶೌಚಾಲಯಗಳು ಉತ್ತಮವಾಗಿರಬೇಕು ಎಂದು ತಿಳಿಸಿದರು.
ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ವಾಹನಗಳ ಮೂಲಕ ಕಸ ಸಂಗ್ರಹಣೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಗೂ ಗಾಜು ಸೇರಿದಂತೆ ಒಣ ಕಸವನ್ನು ಪ್ರತಿ ಮನೆ ಮನೆಗೆ ಹೋಗಿ ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಕಸ ಸಂಗ್ರಹ ವಾಹನವು ಯಾವ ದಿನ ಯಾವ ಗ್ರಾಮ ಪಂಚಾಯಿತಿಗೆ ಬರುತ್ತದೆ ಎಂಬ ಮಾಹಿತಿಯನ್ನು ವೇಳಾಪಟ್ಟಿಯಂತೆ ಸಂಗ್ರಹಿಸಬೇಕು ಎಂದು ಸಿಇಒ ಸೂಚನೆ ನೀಡಿದರು.
ನರೇಗಾ ಯಶಸ್ಸಿಗೆ ಹೀಗೆ ಮಾಡಿ; ಪಿಡಿಒಗಳಿಗೆ ಜಿಪಂ ಸಿಇಒ ಮಹತ್ವದ ಸೂಚನೆ
ಬಳಿಕ ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಂಬಾಡಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆಂಜನೇಯ ಸ್ವಾಮಿ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿದರು.
ಆನಂತರ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಜಲ ಜೀವನ್ ಮಿಷನ್ ಹಾಗೂ ನರೇಗಾ ಕಾಮಗಾರಿಗಳನ್ನು ವೀಕ್ಷಿಸಿದರು.
ತುಂಬಾಡಿ ಗ್ರಾಮ ಪಂಚಾಯಿತಿ ಬಳಿಕ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿದ ಸಿಇಒ, ಕೂಲಿ ಆಧಾರಿತ 500 ಮಂದಿ ರೈತರ ವೈಯಕ್ತಿಕ ಕಾಮಗಾರಿಗಳ ಪಟ್ಟಿಯನ್ನು ಮೊದಲು ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.
ಆನಂತರ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಲಿಂಗಯ್ಯನಪಾಳ್ಯದಲ್ಲಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ ಕಾಮಗಾರಿಗಳನ್ನು ವೀಕ್ಷಿಸಿ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಂತೆ ಸೂಚನೆ ನೀಡಿದರು.
ನಿನ್ನೆ ಅಪ್ಪಚ್ಚು ರಂಜನ್ ಗನ್ ಮ್ಯಾನ್, ಇಂದು ವಿಜಯ ರಾಘವೇಂದ್ರ ಪತ್ನಿ; ಇಬ್ಬರ ಸಾವಿಗೂ ಒಂದೇ ಕಾರಣ!
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ರವೀಶ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಕೀರ್ತಿ ನಾಯಕ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ(ಗ್ರಾ.ಉ.) ಎಂ.ಬಿ ಗುರುಮೂರ್ತಿ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಮಧುಸೂದನ್, ತಾಂತ್ರಿಕ ಸಂಯೋಜಕ ಕೆ.ಎಸ್ ಮಧು ಸೇರಿದಂತೆ ತಾಲ್ಲೂಕು ಮಟ್ಟದ ಸಿಬ್ಬಂದಿ ಹಾಜರಿದ್ದರು.
ಹೆಣ್ಣಿನ ಧ್ವನಿ ಬಳಸಿ 41 ಲಕ್ಷ ಸುಲಿಗೆ! ತುಮಕೂರು ಮೂಲದ ಯುವಕ ಬಂಧನ
+ There are no comments
Add yours