ರಾಷ್ಟ್ರೀಯ ತೋಟಗಾರಿಕಾ ದಿನಾಚರಣೆ ಹಾಗೂ ತೋಟಗಾರಿಕಾ ಭೀಷ್ಮ ಡಾ.ಎಂ.ಹೆಚ್.ಮರಿಗೌಡ ಜನ್ಮಜಯಂತಿ
Tumkurnews
ತುಮಕೂರು; ರಾಜ್ಯದ ತೋಟಗಾರಿಕಾ ಕ್ಷೇತ್ರಕ್ಕೆ ಎಂ.ಹೆಚ್.ಮರಿಗೌಡರ ಕೊಡುಗೆ ಅಪಾರ. ರಾಜ್ಯದ 19 ಜಿಲ್ಲೆಗಳಲ್ಲಿ 357 ಫಾರಂಗಳನ್ನು ತೆರೆದು ತೋಟಗಾರಿಕೆಗೆ ಉತ್ತೇಜನ ನೀಡಿದ್ದರು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಕೊರಟಗೆರೆ ತಾಲ್ಲೂಕಿಗೆ ಜಿಪಂ ಸಿಇಒ ದಿಢೀರ್ ಭೇಟಿ; ಪರಿಶೀಲನೆ
ತುಮಕೂರು ತಾಲೂಕು ಸಿರಿವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತೋಟಗಾರಿಕಾ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ತೋಟಗಾರಿಕಾ ದಿನಾಚರಣೆ ಹಾಗೂ ತೋಟಗಾರಿಕಾ ಭೀಷ್ಮ ಡಾ.ಎಂ.ಹೆಚ್.ಮರಿಗೌಡ ಜನ್ಮಜಯಂತಿ ಕಾರ್ಯಕ್ರಮಕ್ಕೆ ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕೃಷಿಯ ಜೊತೆಗೆ, ತೋಟಗಾರಿಕಾ ಬೆಳೆಗಳ ಮೂಲಕ ಪರಿಸರದ ಜೊತೆಗೆ, ಕೃಷಿ ಇಲಾಖೆಯಿಂದ ತೋಟಗಾರಿಕೆಯನ್ನು ವಿಭಾಗಿಸಿ, ಪ್ರತ್ಯೇಕ ಇಲಾಖೆಯನ್ನಾಗಿಸಿ, ತೋಟಗಾರಿಕೆ ಬೆಳೆಗಳ ಬಗ್ಗೆ ಒತ್ತು ನೀಡಿದರು. ಬೆಂಗಳೂರು, ಕೋಲಾರ, ತುಮಕೂರು ಹುಣಸೆ,ಹಲಸು,ಮಾವು ಬೆಳೆಯುವ ಮೂಲಕ ಬಂಜರು ಭೂಮಿಯನ್ನು ತೋಟವಾಗಿ ಪರಿವರ್ತಿಸಿ, ರೈತನನ್ನು ಆರ್ಥಿಕವಾಗಿ ಸದೃಢರನ್ನಾಗಿಸಿದರು. ಇದರ ಫಲವಾಗಿ ಸರಕಾರ 1993ನಲ್ಲಿ ಡಾ.ಎಂ.ಹೆಚ್. ಮರಿಗೌಡರಿಗೆ ತೋಟಗಾರಿಕಾ ರತ್ನ ಬಿರುದು ನೀಡಿ ಗೌರವಿಸಿತು ಎಂದು ತಿಳಿಸಿದರು.
ಏಷ್ಯನ್ ಚಾಂಪಿಯನ್ಸ್ ಟ್ರೋಪಿ ಹಾಕಿ ಟೂರ್ನಿ; ಇಂದು ಭಾರತ- ಪಾಕ್ ಸೆಣಸು
ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಬಿ.ಸಿ.ಶಾರದಮ್ಮ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳಿಗೆ ಉತ್ತೇಜನ ನೀಡಿ, ಕೃಷಿಗೆ ಪರ್ಯಾಯವಾಗಿ ತೋಟಗಾರಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ, ರೈತರಿಗೆ ಶಾಶ್ವತ ಆದಾಯ ಬರುವಂತೆ ಮಾಡಿದ ತೋಟಗಾರಿಕಾ ಪಿತಾಮಹ ಡಾ.ಎಂ.ಹೆಚ್.ಮರಿಗೌಡರ 107ನೇ ಜನ್ಮಜಯಂತಿ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳಿಗೆ ತೋಟಗಾರಿಕೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಿರಿವರ ಹೈಸ್ಕೂಲ್‍ನ ಮಕ್ಕಳಿಗೆ ಚಿತ್ರಸ್ಪರ್ಧೆ, ಪ್ರಭಂಧ, ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಇಂದು ಆ ಮಕ್ಕಳಿಗೆ ಬಹುಮಾನ ವಿತರಿಸಲಾಗುತ್ತಿದೆ. ಬಹುವಾರ್ಷಿಕ ಬೆಳೆಗಳಾದ ಬಾಳೆ, ಹಲಸು, ಸೀಬೆ, ಸಪೋಟ, ತೆಂಗು, ಅಡಿಕೆ, ಮಾವು ಇನ್ನಿತರ ತೋಟಗಾರಿಕಾ ಬೆಳೆಗಳು ಮತ್ತು ಅವರು ಬೀಜೋತ್ಪಾದನಾ ಕೇಂದ್ರಗಳನ್ನು ನಿರ್ಮಿಸುವಲ್ಲಿ ಡಾ.ಎಂ.ಹೆಚ್.ಮರಿಗೌಡರ ಪಾತ್ರ ಮಹತ್ವದ್ದು ಎಂದರು.
ಕಾರ್ಯಕ್ರಮದ ಅಂಗವಾಗಿ ಮಕ್ಕಳು ರಚಿಸಿದ್ದ ಚಿತ್ರಗಳನ್ನು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಸುಧಾಕರ್ ಹೆಚ್.ಎ.,ಸಹಾಯಕ ತೋಟಗಾರಿಕಾ ನಿರ್ದೇಶಕ ರೇಖಾ ಎಂ.ಎನ್., ರಾಘವೇಂದ್ರ, ದರ್ಶನ್ ಕೆ.ಎಸ್., ಆರ್.ಐ .ಮಂಜುನಾಥ್, ಕಾಲೇಜಿನ ಪ್ರಾಂಶುಪಾಲ ಕುಮಾರಯ್ಯ, ಉಪಪ್ರಾಂಶುಪಾಲ ಚೇತನ್, ಸಹಾಯಕ ತೋಟಗಾರಿಕಾ ಅಧಿಕಾರಿಗಳಾದ ಅಂಜನ್‍ಕುಮಾರ್, ಶಿವಕುಮಾರ್, ಸಿರಿವರ ಶಾಲೆಯ ಸಿಬ್ಬಂದಿ ಮತ್ತು ಮಕ್ಕಳು ಉಪಸ್ಥಿತರಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಹೆಣ್ಣಿನ ಧ್ವನಿ ಬಳಸಿ 41 ಲಕ್ಷ ಸುಲಿಗೆ! ತುಮಕೂರು ಮೂಲದ ಯುವಕ ಬಂಧನ
+ There are no comments
Add yours