ಗೃಹಲಕ್ಷ್ಮಿ ಪುನಃ ಮುಂದೂಡಿಕೆ; ಸಿಎಂ ಸಿದ್ದರಾಮಯ್ಯ ಹೇಳಿಕೆ

1 min read

ಗೃಹಲಕ್ಷ್ಮಿ ಯೋಜನೆ ಮುಂದೂಡಿಕೆ; ಸಿಎಂ ಸಿದ್ದರಾಮಯ್ಯ ಹೇಳಿಕೆ 

Tumkurnews.in
ಬೆಳಗಾವಿ; ಮನೆಯೊಡತಿಗೆ ಪ್ರತಿ ತಿಂಗಳು 2000 ರೂ. ಮಾಸಾಶನ ನೀಡುವ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ 1 ಕೋಟಿ 6 ಲಕ್ಷ ಕುಟುಂಬಗಳ ನೋಂದಣಿಯಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮವನ್ನು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು.

ಗೃಹಲಕ್ಷ್ಮಿ ಉದ್ಘಾಟನೆ ಯಾವತ್ತು?; ದಿನಾಂಕ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ
ಗೃಹಲಕ್ಷ್ಮಿ ಯೋಜನೆಗೆ ಆ.20ರಂದು ಚಾಲನೆ ನೀಡುವುದಾಗಿ ಹೇಳಲಾಗಿತ್ತು. ಆದರೆ ದಿನಾಂಕ ಮುಂದೂಡಲ್ಪಟ್ಟಿದೆ. ಇದೀಗ ‘ಆಗಸ್ಟ್ 29 ಅಥವಾ 30ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

ಗೃಹಲಕ್ಷ್ಮಿಗೆ ಅಭೂತಪೂರ್ವ ಸ್ಪಂದನೆ; ಎಲ್ಲಿ, ಎಷ್ಟು ನೋಂದಣಿಯಾಗಿದೆ ಗೊತ್ತೇ?

About The Author

You May Also Like

More From Author

+ There are no comments

Add yours