ಶಕ್ತಿ ಯೋಜನೆಗೆ ಬ್ರೇಕ್!?; ಸ್ವತಃ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ
Tumkurnews.in
ಬೆಂಗಳೂರು; “ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಸ್ಥಗಿತಗೊಳ್ಳುತ್ತದೆ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಸರ್ಕಾರ ನಿಲ್ಲಿಸುತ್ತದೆ” ಎಂಬ ವದಂತಿ ವ್ಯಾಪಕವಾಗಿ ಹಬ್ಬಿದ್ದು, ವದಂತಿಯನ್ನು ಸರ್ಕಾರ ನಿರಾಕರಿಸಿದೆ. ಯಾವುದೇ ಕಾರಣಕ್ಕೂ ಸರ್ಕಾರ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
“ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು, ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಮುಂದಿನ 10 ವರ್ಷಗಳ ಕಾಲ ಶಕ್ತಿ ಯೋಜನೆ ಜಾರಿಯಲ್ಲಿರುತ್ತದೆ ಎಂದು ಭರವಸೆ ನೀಡಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಕೂಡ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾದ ಶಕ್ತಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದಿದೆ. ಒಟ್ಟಾರೆಯಾಗಿ ಉಚಿತ ಬಸ್ ಪ್ರಯಾಣ ಯೋಜನೆ ಸ್ಥಗಿತಗೊಳ್ಳುತ್ತದೆ ಎಂದು ಆತಂಕದಲ್ಲಿದ್ದ ಮಹಿಳೆಯರು ನಿರಾಳರಾಗಿದ್ದಾರೆ.
ಗೃಹಲಕ್ಷ್ಮಿ ಪುನಃ ಮುಂದೂಡಿಕೆ; ಸಿಎಂ ಸಿದ್ದರಾಮಯ್ಯ ಹೇಳಿಕೆ
+ There are no comments
Add yours