ಜಿಮ್ ಸ್ಥಾಪಿಸಲು ಸಹಾಯಧನ: ಅರ್ಜಿ ಆಹ್ವಾನ
Tumkurnews.in
ತುಮಕೂರು; ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಂತರರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕರ್ನಾಟಕದ ಕ್ರೀಡಾಪಟುಗಳು ಭರ್ತಿಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 5, 2023ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಆನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0816-2278124 ಅಥವಾ ಮೊ.ಸಂ. 9741691379ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇವಲ 8 ವರ್ಷಕ್ಕೆ ಇನ್ಸ್‌ಪೆಕ್ಟರ್ ಹುದ್ದೆಗೇರಿದ ಬಾಲಕ!: ಶಿವಮೊಗ್ಗದ ಹೃದಯವಂತ ಪೊಲೀಸ್
+ There are no comments
Add yours