ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

1 min read

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Tumkurnews
ತುಮಕೂರು: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 06-18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿ ನೀಡಲು ಪ್ರಕರಣವು 01-08-2022 ರಿಂದ 31-07-2023ರೊಳಗೆ ನಡೆದಿರಬೇಕು. ದಿನಾಂಕ: 01-08-2005ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
2023-24ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು/ಮಧುಗಿರಿ, ಯುವಜನ ಸೇವೆ ಮತ್ತು ಸಬಲೀಕರಣ ಇಲಾಖೆ, ತುಮಕೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತುಮಕೂರು ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ಇವರುಗಳಿಂದ ಪಡೆದು, ಅರ್ಜಿಯನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸೆಪ್ಟೆಂಬರ್ 15, 2023ರೊಳಗೆ ಸಲ್ಲಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಜಿಮ್ ಸ್ಥಾಪಿಸಲು ಸಹಾಯಧನ: ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours