ರೈತರ ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ
Tumkurnews
ತುಮಕೂರು: ಜಿಲ್ಲೆಯ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಲು 2023-24ನೇ ಸಾಲಿನ “ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳೊಂದಿಗೆ ಡಿಸಿ ವಿಡಿಯೋ ಕಾನ್ಫರೆನ್ಸ್; ಇಲ್ಲಿದೆ ಸಮಗ್ರ ಸುದ್ದಿ
ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ಪರಿಹಾರ, ಬೆಳೆ ವಿಮೆ, ಬೆಳೆ ಸಾಲ, ಬೆಂಬಲ ಬೆಲೆ ಯೋಜನೆ ಮತ್ತು ಸರ್ಕಾರದ ಮತ್ತಿತರ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಳಸಲಾಗುತ್ತದೆ. ಆದ್ದರಿಂದ ರೈತ ಬಾಂಧವರು ತಮ್ಮ ಮೊಬೈಲ್ ಆ್ಯಪ್ ಬಳಸಿ ತಾವು ಬೆಳೆದಿರುವ ಬೆಳೆಗಳಿಗೆ ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡಿ ಬೆಳೆ ವಿವರಗಳನ್ನು ದಾಖಲಿಸಬೇಕೆಂದು ತಿಳಿಸಿದ್ದಾರೆ.
ಮೊಬೈಲ್ ಆಪ್ ಬಳಸಲು ನಿಮ್ಮ ಗ್ರಾಮಕ್ಕೆ ನೇಮಕವಾದ ಖಾಸಗಿ ನಿವಾಸಿಗಳ ಸಹಾಯ ಪಡೆಯಬಹುದು ಎಂದು ತಿಳಿಸಿದ್ದಾರೆ.
ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸುವ ವಿಧಾನ:
ಮೊದಲು ಪ್ಲೇ ಸ್ಟೋರ್‍ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್- 2023-24” ಆ್ಯಪ್ ಡೌನ್‍ಲೊಡ್ ಮಾಡಿಕೊಳ್ಳುವುದು. ಓಟಿಪಿ ಮೂಲಕ ಆಧಾರ್ ದೃಢೀಕರಿಸಲು ಆಧಾರ್ ಸಂಖ್ಯೆ ನಮೂದಿಸಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಸಲ್ಲಿಸುವುದು. ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದು. ನಮೂದಿಸಿದ ಮೊಬೈಲ್ ಸಂಖ್ಯೆಗೆ ಓಟಿಪಿ ಬರುತ್ತದೆ. ಓಟಿಪಿ ದಾಖಲಿಸಿ ಸಲ್ಲಿಸುವುದು. ಮೊಬೈಲ್ ಆಪ್ ಫ್ರೂಟ್ಸ್ ತಂತ್ರಾಂಶಕ್ಕೆ ಸಂಪರ್ಕಗೊಂಡಿದ್ದ ರೈತರ ಗುರುತಿನ ಸಂಖ್ಯೆ (ಎಫ್ಐಡಿ) ಯಲ್ಲಿ ಸೇರ್ಪಡೆಯಾದ ಎಲ್ಲಾ ಪಹಣಿ ವಿವರ, ಪಾಲಿಗಾನ್ ಹಾಗೂ ಜಿ.ಐ.ಎಸ್. ಮ್ಯಾಪ್ ಸ್ವಯಂಚಾಲಿತವಾಗಿ ಡೌನ್‍ಲೋಡ್ ಆಗಿ, ಎಲ್ಲಾ ಸರ್ವೇ ನಂಬರ್’ಗಳ ವಿವರ ಕಾಣಿಸುತ್ತದೆ. ಬೆಳೆ ಸಮೀಕ್ಷೆ ಪ್ರಾರಂಭಿಸಲು ಸರ್ವೆ ನಂಬರ್ ಆಯ್ಕೆ ಮಾಡಿ, ಸದರಿ ಸರ್ವೇ ನಂಬರ್’ನ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ, ತಾವು ಬೆಳೆದ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ಎರಡು ಫೋಟೋ ತೆಗೆದು ಮಾಹಿತಿಯನ್ನು ದಾಖಲಿಸಬೇಕು ಎಂದು ತಿಳಿಸಿದ್ದಾರೆ.
ಹೆಣ್ಣಿನ ಧ್ವನಿ ಬಳಸಿ 41 ಲಕ್ಷ ಸುಲಿಗೆ! ತುಮಕೂರು ಮೂಲದ ಯುವಕ ಬಂಧನ
ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ನಿಗದಿತ ಸಮಯದೊಳಗೆ ಅಪ್‍ಲೋಡ್ ಮಾಡುವುದು ಮತ್ತು ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ: 8448447715 ಅಥವಾ ಗ್ರಾಮದ ಖಾಸಗಿ ನಿವಾಸಿಗಳು ಮತ್ತು ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಮಳೆ ಅಭಾವ; ನೀರು ಬಳಸದಂತೆ ರೈತರಿಗೆ ನೋಟೀಸ್!
+ There are no comments
Add yours