ಸಾರ್ವಜನಿಕರನ್ನು ಅಲೆದಾಡಿಸಬೇಡಿ: ಪಾಲಿಕೆ ಅಧಿಕಾರಿಗಳಿಗೆ ಶಾಸಕ ಜ್ಯೋತಿಗಣೇಶ್ ಸೂಚನೆ

1 min read

 

ಅರ್ಜಿ ಸಲ್ಲಿಸಿ ವರ್ಷವಾದರೂ ವಿಲೇವಾರಿ ಮಾಡುವುದಿಲ್ಲ: ಶಾಸಕ ಜ್ಯೋತಿಗಣೇಶ್ ಅಸಮಾಧಾನ

Tumkurnews
ತುಮಕೂರು; ಪಾಲಿಕೆ ವ್ಯಾಪ್ತಿಯ ಖಾತೆ ಬದಲಾವಣೆ, ನೀರು ಸರಬರಾಜು, ನೈರ್ಮಲ್ಯತೆ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಸಾರ್ವಜನಿಕರಿಗೆ ತಕ್ಷಣವೇ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕೆಂದು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಅವರು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ಸಭಾಂಗಣದಲ್ಲಿಂದು ಜರುಗಿದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿಧಿಗಳನ್ನೇ ನೇರವಾಗಿ ಪ್ರಶ್ನೆ ಮಾಡುವುದರಿಂದ ನಾವೇ ಉತ್ತರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ದೂರುಗಳು ಬಾರದ ರೀತಿಯಲ್ಲಿ ಅಧಿಕಾರಿಗಳು ಜನರಿಗೆ ಸಮರ್ಪಕ ಸೇವೆ ನೀಡಬೇಕು. ಖಾತೆ ತಿದ್ದುಪಡಿ, ಬದಲಾವಣೆಗೆ ಅರ್ಜಿ ಸಲ್ಲಿಸಿ ವರ್ಷವಾದರೂ ವಿಲೇವಾರಿ ಮಾಡುವುದಿಲ್ಲ. ಜನನ-ಮರಣ ಪ್ರಮಾಣ ಪತ್ರಗಳನ್ನು ನೀಡಲು ತಿಂಗಳುಗಟ್ಟಲೆ ಸಾರ್ವಜನಿಕರನ್ನು ಅಲೆದಾಡಿಸಲಾಗುತ್ತಿದೆ ಎಂದು ದೂರುಗಳು ಬಂದಿದ್ದು, ಜನರನ್ನು ಕಾಯಿಸದೆ ಆದ್ಯತೆ ಮೇಲೆ ತ್ವರಿತವಾಗಿ ಅವರ ಕೆಲಸ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳಿಗೆ ಶಾಸಕರು, ಪಾಲಿಕೆ ಸದಸ್ಯರು ಶಿಫಾರಸ್ಸು ಮಾಡಿದಾಗ ಮಾತ್ರ ಕ್ರಮ ಕೈಗೊಳ್ಳುವ ಪದ್ಧತಿ ಸರಿಯಲ್ಲ. ಸಭೆ ನಡೆಸಿ ಚರ್ಚಿಸಿದರಷ್ಟೇ ಜನರಿಗೆ ಸಮಸ್ಯೆ ಬಗೆಹರಿಯುವುದಿಲ್ಲ. ಚರ್ಚಿಸಿದ ವಿಷಯಗಳು ಕಾರ್ಯಗತಕ್ಕೆ ಬಂದಾಗ ಮಾತ್ರ ಜನರ ಸಮಸ್ಯೆ ಬಗೆಹರಿಯುವುದರೊಂದಿಗೆ ನಗರದ ಅಭಿವೃದ್ಧಿ ಸಾಧ್ಯವೆಂದು ತಿಳಿಸಿದರು.
ನಗರದಲ್ಲಿ ಸಂಚಾರಿ ವ್ಯವಸ್ಥೆಯನ್ನು ಸುಗಮಗೊಳಿಸಲು ಸ್ಮಾರ್ಟ್ ಸಿಟಿಯಲ್ಲಿ ಅನುದಾನವನ್ನು ಮೀಸಲಿಟ್ಟಿರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಅಪಘಾತ ವಲಯಗಳನ್ನು ಪತ್ತೆ ಮಾಡಿ ಈ ಅನುದಾನವನ್ನು ಬಳಸಿಕೊಂಡು ಸುರಕತಾ ಕ್ರಮಗಳನ್ನು ಕೈಗೊಳ್ಳಬೇಕು, ನಗರದ ಅಭಿವೃದ್ಧಿ ದೃಷ್ಟಿಯಿಂದ ತುರ್ತಾಗಿ ಅನುದಾನ ಕೋರಿ ಜಿಲ್ಲಾಧಿಕಾರಿಗಳ ಮೂಲಕ ಉಸ್ತುವಾರಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಬೇಕೆಂದು ಆಯುಕ್ತೆ ಅಶ್ವಿಜ ಬಿ.ವಿ. ಅವರಿಗೆ ಸೂಚನೆ ನೀಡಿದರು.
ಕಳೆದ 8 ತಿಂಗಳುಗಳಿಂದ ಚುನಾವಣಾ ಕರ್ತವ್ಯದಲ್ಲಿ ನಿರತವಾಗಿದ್ದ ಪಾಲಿಕೆ ಈಗಲಾದರೂ ನಗರದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮನಸು ಮಾಡಬೇಕು. ಪಾಲಿಕೆ ವ್ಯಾಪ್ತಿಯ ನಿವೇಶನಗಳಿಗೆ ಸಂಬಂಧಿಸಿದಂತೆ ಖಾತೆಯ ದಾಖಲೆಗಳಲ್ಲಿ ಅಳತೆ ವ್ಯತ್ಯಾಸವಿದ್ದು, ತಿದ್ದುಪಡಿಗೆ ಕ್ರಮಕೈಗೊಳ್ಳಬೇಕು. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಳತೆ ತಿದ್ದುಪಡಿ, ಮ್ಯುಟೇಷನ್ ತಿದ್ದುಪಡಿ ಕುರಿತು ವಾರ್ಡುಗಳಲ್ಲಿ ಕ್ಯಾಂಪ್‍ಗಳನ್ನು ಹಮ್ಮಿಕೊಂಡು ಸರಿಪಡಿಸಬೇಕೆಂದು ನಿರ್ದೇಶನ ನೀಡಿದರು.

ಮಧ್ಯವರ್ತಿಗಳ ಹಾವಳಿ, ವ್ಯಾಪಕ ಭ್ರಷ್ಟಾಚಾರ; ಪಾಲಿಕೆ ಸಭೆಯಲ್ಲಿ ಸದಸ್ಯರ ಆಕ್ರೋಶ

About The Author

You May Also Like

More From Author

+ There are no comments

Add yours