ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಮನವಿ

1 min read

 

ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬ; ಜಿಲ್ಲಾಧಿಕಾರಿ ಮನವಿ

Tumkurnews
ತುಮಕೂರು: ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ, ನೈಸರ್ಗಿಕ ಮೂರ್ತಿಯೊಂದಿಗೆ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ತದನಂತರ ಗೌರಿ, ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ವಿಸರ್ಜಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸುವಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಮನವಿ ಮಾಡಿದ್ದಾರೆ.

ಫ್ಯಾಷನ್ ಡಿಸೈನರ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಪ್ರತಿ ವರ್ಷದಂತೆ ಈ ವರ್ಷವೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೆ ರ್ಸಾಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, 1974 ರ ಪ್ರಕಾರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್. ಸೆಕ್ಷನ್ 1860 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣ, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ, ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡುವುದು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ

About The Author

You May Also Like

More From Author

+ There are no comments

Add yours