ಕೋಳಿ ಸಾಕಿ ಭರ್ಜರಿ ಲಾಭ ಗಳಿಸಿ: ಬನ್ನಿ ಮೊದಲು ತರಬೇತಿಗೆ ಪಡೆಯಿರಿ
Tumkurnews
ತುಮಕೂರು: ಕೋಳಿ ಸಾಕಾಣಿಕೆ ಸಾಕಷ್ಟು ಲಾಭದಾಯಕವಾಗಿದ್ದು, ನಿರುದ್ಯೋಗಿಗಳಿಗೆ ವರದಾನವಾಗಿದೆ. ಆದರೆ ಬಹುತೇಕ ಜನರಿಗೆ ಕೋಳಿ ಸಾಕಾಣಿಕೆ ಬಗ್ಗೆ ಸರಿಯಾದ ಮಾಹಿತಿ, ತರಬೇತಿ ಇಲ್ಲ. ಹಾಗಾಗಿ ಕೋಳಿ ಸಾಕಾಣಿಕೆ ಬಗ್ಗೆ ಆಸಕ್ತಿ ಇದ್ದರೂ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿದ್ದಾರೆ. ಅಂತಹವರಿಗೆ ಇಲ್ಲೊಂದು ಸುವರ್ಣವಕಾಶವಿದೆ.
ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
ಉಚಿತ ತರಬೇತಿ: ರುಡ್‍ಸೆಟ್ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ಸೆಪ್ಟೆಂಬರ್ 3ರಂದು 26 ಕಡೆ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದೆ.
ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324, 9241482541, 8884554510ಯನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
+ There are no comments
Add yours