ಮೂರು ವರ್ಷಗಳ ಬಳಿಕ‌ ಶಿಕ್ಷಕರ ಕ್ರೀಡಾಕೂಟ: ಆಡಿ ನಲಿದ ಶಿಕ್ಷಕರು

1 min read

ಮೂರು ವರ್ಷಗಳ ಬಳಿಕ‌ ಶಿಕ್ಷಕರ ಕ್ರೀಡಾಕೂಟ ಆಯೋಜನೆ

Tumkurnews
ತುಮಕೂರು: ಶಾಲಾ ಶಿಕ್ಷಣ ಇಲಾಖೆ ತುಮಕೂರು ದಕ್ಷಿಣ ಜಿಲ್ಲೆ ತುಮಕೂರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ತುಮಕೂರು ತಾಲೂಕು ಘಟಕದವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿಜಯನಗರದ ಸರ್ವೋದಯ ಪ್ರೌಢಶಾಲೆಯ ಆವರಣದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಫರ್ಧೆಗಳನ್ನು ಆಯೋಜಿಸಲಾಗಿತ್ತು.
ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಜಿ.ಬಿ ಜೋತಿಗಣೇಶ್, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಮತ್ತು ಜವಾಬ್ದಾರಿಯುತ ಕೆಲಸವಾಗಿದೆ. ಹಾಗಾಗಿ ಒತ್ತಡ ಸಹಜ. ಈ ಒತ್ತಡದಿಂದ ಹೊರಬರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಲಿವೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣಗಳನ್ನು ಕಲಿಸುತ್ತದೆ. ಆದ್ದರಿಂದ ಶಿಕ್ಷಕರು ತಾವು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಮಕ್ಕಳನ್ನು ಪಾಲ್ಗೊಳ್ಳುವಂತೆ ಮಾಡಿ, ಅವರಲ್ಲಿಯೂ ಕ್ರೀಡಾ ಮನೋಭಾವನೆ ಬೆಳೆಸಬೇಕೆಂದು ಸಲಹೆ ನೀಡಿದರು
ಗುಣಾತ್ಮಕ ಶಿಕ್ಷಣ ಇಂದಿನ ಅಗತ್ಯವಾಗಿದೆ. ಇಂದು ಹೆಚ್ಚು ನಿರುದ್ಯೋಗಿಗಳೆಂದರೆ ಪದವಿಧರರು, ಹಾಗಾಗಿ ಶಿಕ್ಷಣದ ಜೊತೆ ಜೊತೆಗೆ ಕೌಶಲ್ಯಗಳನ್ನು ಕಲಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು, ಅದರಲ್ಲಿಯೂ ಪ್ರಾಥಮಿಕ ಶಾಲಾ ಶಿಕ್ಷಕರು ಹೊಸ ಹೊಸ ಬೋಧನಾ ಕ್ರಮಗಳನ್ನು ಅಳವಡಿಸಿಕೊಂಡು ಮಕ್ಕಳನ್ನು ಕೌಶಲ್ಯಯುತ ಯುವಕರನ್ನಾಗಿ ರೂಪಿಸುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂದರು.

ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಇಓ ಡಾ.ಸೂರ್ಯಕಲಾ ಮಾತನಾಡಿ, ಕ್ರೀಡೆ ಮನುಷ್ಯನ ಮೈ.ಮನಗಳನ್ನು ಅರಳಿಸುತ್ತದೆ. ರೋಗ ರಜೀನ ಮುಕ್ತ ಜೀವನ ನಿಮ್ಮದಾಗಲು ದೈಹಿಕ ಚಟುವಟಿಕೆ ಅತ್ಯಗತ್ಯ. ನಾನು ಖೋ-ಕೋ ಕ್ರೀಡೆಯಲ್ಲಿ ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಹೆಗ್ಗಳಿಕೆ ಇದೆ. ಕ್ರೀಡೆಯಲ್ಲಿ ಸಾಧನೆ ಮಾಡಿದರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ದೊರೆಯಲಿವೆ. ನೀವು ಮತ್ತು ನಿಮ್ಮ ಕುಟುಂಬದವರು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತುಮಕೂರು ತಾಲೂಕು ಘಟಕದ ಅಧ್ಯಕ್ಷ ಪಿ.ಜಿ.ತಿಮ್ಮೇಗೌಡ, ಕಳೆದ ಮೂರು ವರ್ಷದಿಂದ ಕೋವಿಡ್ ನಿಂದಾಗಿ ಶಿಕ್ಷಕರಿಗೆ ಕ್ರೀಡಾ ಚಟುವಟಿಕೆ ಆಯೋಜಿಸಿರಲಿಲ್ಲ. ಈ ಬಾರಿ ಆಯೋಜನೆ ಮಾಡಲಾಗಿದೆ. ಸುಮಾರು 250-300 ಜನ ಶಿಕ್ಷಕ,ಶಿಕ್ಷಕಿಯರು ಪಾಲ್ಗೊಂಡಿದ್ದಾರೆ. ಎಲ್ಲರಿಗೂ ಓಓಡಿ ಕಲ್ಪಿಸಲಾಗಿದೆ. ಪುರುಷ ಶಿಕ್ಷಕರಿಗೆ ವೈಯುಕ್ತಿಕ ಸ್ಫರ್ಧೆಯಲ್ಲಿ 100 ಮೀ, 200 ಮೀ ಓಟ, ಉದ್ದಜಿಗಿತ, ಗುಂಡು ಎಸೆತ, ಚಕ್ರ ಎಸೆತ, ಗುಂಪು ಆಟಗಳಲ್ಲಿ ವಾಲಿಬಾಲ್, ಕಬ್ಬಡಿ, ಷಟಕ್ ಕಾಕ್, ಕ್ರಿಕೆಟ್ ಆಯೋಜಿಸಲಾಗಿದೆ.

18 ವರ್ಷ ತುಂಬಿದೆಯೇ? ತೆಂಗು ಉದ್ದಿಮೆ ಆರಂಭಿಸಿ, ಪಡೆಯಿರಿ 15 ಲಕ್ಷ ರೂ.ವರೆಗೆ ಸಹಾಯ ಧನ!
ಮಹಿಳಾ ಶಿಕ್ಷಕಿಯರಿಗೆ ವೈಯುಕ್ತಿಕ ವಿಭಾಗದಲ್ಲಿ 100-200 ಮೀಟರ್ ಓಟ, ಗುಂಡು ಎಸೆತ, ಚಕ್ರ ಎಸೆತ, ಮ್ಯಾಸಿಕಲ್ ಚೇರ್, ಗುಂಪು ಆಟದಲ್ಲಿ ಥ್ರೋ ಬಾಲ್ ಕಬ್ಬಡಿ, ಷಟಲ್ ಕಾಕ್ ಆಯೋಜಿಸಲಾಗಿದೆ. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾವಗೀತೆ, ಜನಪದ ಗೀತೆ, ಭಕ್ತಿಗೀತೆ, ರಂಗಗೀತೆಗಳು, ಘಝಲ್ ಆಯೋಜಿಸಲಾಗಿದೆ. ಇಂದೇ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯ ವಿಷ್ಣುವರ್ಧನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಗಿರಿಜಮ್ಮ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಕೆ.ಎ.ಮಂಜುಳ, ತುಮಕೂರಿನ ಪ್ರಧಾನ ಕಾರ್ಯದರ್ಶಿ ಮಹದೇವಯ್ಯ, ಖಜಾಂಚಿ ಲೋಕೇಶ್, ತಾಲೂಕು ಉಪಾಧ್ಯಕ್ಷೆ ಕೋಮಲ, ಜಯರಾಮ್, ಗೌರವಾಧ್ಯಕ್ಷ ಶಿವಕುಮಾರ್, ಪದಾಧಿಕಾರಿಗಳಾದ ದಿನೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಇಂದಿನ ತಿಪಟೂರು ಕೊಬ್ಬರಿ ಧಾರಣೆ

About The Author

You May Also Like

More From Author

+ There are no comments

Add yours