ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು: ಸಿದ್ಧತೆ ಪರಿಶೀಲಿಸಿದ ಡಿಸಿ
Tumkurnews
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ತಿಂಗಳ 6ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಮಧುಗಿರಿಯಲ್ಲಿ ನಡೆಯಲಿರುವ “ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ” ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು
ಸಮಾರಂಭದ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ವೇದಿಕೆ ವ್ಯವಸ್ಥೆ, ಇಲಾಖೆ ಯೋಜನೆಗಳ ಪ್ರದರ್ಶನಕ್ಕೆ ಮಳಿಗೆಗಳ ವ್ಯವಸ್ಥೆ, ವಾಹನ ಸಂಚಾರ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಊಟ ಉಪಾಹಾರದ ವ್ಯವಸ್ಥೆ ಇತ್ಯಾದಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೇದಿಕೆ ಸ್ಥಳದಲ್ಲಿ ಪರಿಶೀಲನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಹಾಗೂ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
+ There are no comments
Add yours