ಸಿಎಂ ಸಿದ್ದು ಮಧುಗಿರಿ ಭೇಟಿ: ಪರಂ, ರಾಜಣ್ಣ ಜಂಟಿ‌ ಸುದ್ದಿಗೋಷ್ಠಿ

1 min read

 

ಮಧುಗಿರಿಯಲ್ಲಿ ಸೆ.6ರಂದು ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭ

Tumkurnews
ತುಮಕೂರು: ಕ್ಷೀರಭಾಗ್ಯ ಯೋಜನೆ ಜಾರಿಗೊಂಡು ಹತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಮಧುಗಿರಿಯ ರಾಜೀವ್‍ಗಾಂಧಿ ಕ್ರೀಡಾಂಗಣದಲ್ಲಿ “ಕ್ಷೀರಭಾಗ್ಯ” ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕ್ಷೀರಭಾಗ್ಯ ಯೋಜನೆಗೆ ದಶಮಾನೋತ್ಸವ ಸಂಭ್ರಮ. ಈ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮಕ್ಕಾಗಿ ಮಧುಗಿರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನೊಳಗೊಂಡಂತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎನ್. ರಾಜಣ್ಣ, ಮಧುಗಿರಿಯಲ್ಲಿ ರಾಜ್ಯಮಟ್ಟದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಅಭೂತಪೂರ್ವ ಕಾರ್ಯಕ್ರಮದ ಅಗತ್ಯತೆಗಳ ಕೆಲಸ ಭರದಿಂದ ಸಾಗಿದೆ ಎಂದರು.

ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
ಮಧುಗಿರಿ ಪಟ್ಟಣಕ್ಕೆ ಸೆ. 6ರಂದು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದ ಅವರು, ಈ ದಶಮಾನೋತ್ಸವ ಕಾರ್ಯಕ್ರಮಯದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಗ್ರಾಮೀಣ ಜನರ ಆರ್ಥಿಕಾಭಿವೃದ್ಧಿಗೆ ಹೈನುಗಾರಿಕೆ ಹೆಚ್ಚು ಪೂರಕ. ಹಾಗಾಗಿ ಹಳ್ಳಿಗಳಲ್ಲಿ ಹೈನುಗಾರಿಕೆ ಮತ್ತಷ್ಟು ಹೆಚ್ಚಾಗಬೇಕು. ಜತೆಗೆ ಹೆಚ್ಚಿನ ಗುಣಮಟ್ಟದ ಪದಾರ್ಥ ನೀಡುವ ಕೆಲಸವನ್ನು ಹಾಲು ಒಕ್ಕೂಟ ಮಾಡುತ್ತಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಗೃಹ ಲಕ್ಷ್ಮಿಗೆ ಚಾಲನೆ; ನೋಂದಣಿಗೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ
ಈ ಕಾರ್ಯಕ್ರಮದ ನೇತೃತ್ವವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಹಿಸಿಕೊಂಡಿದ್ದಾರೆ. ನಮ್ಮ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಅಧಿಕಾರಿಗಳು ಶ್ರಮ ವಹಿಸಿ ಕೆಲಸ ಮಾಡುವುದರೊಂದಿಗೆ ಸಹಕಾರ ನೀಡುತ್ತಿದ್ದಾರೆ ಎಂದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಮಧುಗಿರಿಯ ಇತಿಹಾಸದಲ್ಲಿ ಈ ಹಿಂದೆ ಎಂದೂ ನೋಡದ ಕ್ಷೀರಭಾಗ್ಯ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕಾಗಿ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಹೇಗಿದೆ ನೋಡಿ: ವಿಡಿಯೋ
ಕ್ಷೀರಭಾಗ್ಯ ಯೋಜನೆಯು ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಯಾಯಿತು. ಮಕ್ಕಳ ಪೌಷ್ಟಿಕತೆಗೆ ಸಹಾಯವಾಗಲಿ ಎಂದು ಅಂದು ಜಾರಿಗೆ ತಂದಿದ್ದರು. ಇದರಿಂದ ರಾಜ್ಯದಲ್ಲಿ ಸುಮಾರು 65 ಲಕ್ಷ ಮಕ್ಕಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
1 ರಿಂದ 10ನೇ ತರಗತಿ ಮಕ್ಕಳಿಗೆ ಅನುಕೂಲವಾಗುವ ಕಾರ್ಯಕ್ರಮ ಇದಾಗಿದ್ದು, 10 ವರ್ಷದ ಸಂಭ್ರಮವನ್ನು ಆಚರಣೆ ಮಾಡಲು ತೀರ್ಮಾನಿಸಿದ್ದು, ಸಹಕಾರಿ ಸಚಿವರು ಐತಿಹಾಸಿಕ ಸಮಾರಂಭವನ್ನು ಮಧುಗಿರಿಯಲ್ಲಿ ಏರ್ಪಡಿಸಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು: ಸಿದ್ಧತೆ ಪರಿಶೀಲಿಸಿದ ಡಿಸಿ
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸುಮಾರು 156 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 13 ಮಳಿಗೆಗಳನ್ನು ಸ್ಥಾಪಿಸಿ ಜನರಿಗೆ ಅನುಕೂಲವಾಗುವ ಮಾರ್ಗದರ್ಶನ ಮಾಡಲಾಗುತ್ತದೆ ಎಂದರು.
ನಾವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ವಿರೋಧ ಪಕ್ಷದವರು ಟೀಕೆ ಟಿಪ್ಪಣಿ ಮಾಡಿದರು. ಆದರೆ ಇಂದು ನಮ್ಮ ಸರ್ಕಾರ ಟೀಕೆಗಳನ್ನು ಸುಳ್ಳು ಮಾಡಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಅನುಷ್ಟಾನ ಮಾಡಿದ್ದೇವೆ ಎಂದರು.

ನೀವು ಕೋಳಿ ಸಾಕಾಣಿಕೆ ಕಲಿಯಬೇಕೆ? ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಪ್ರತಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆಯ ಕಾರ್ಯಕ್ರಮ ಯಶಸ್ವಿಯಾಗಿದೆ. 2 ಕೋಟಿ 19 ಲಕ್ಷ ಗ್ರಾಹಕರಿಗೆ ವಿದ್ಯುತ್ ಉಚಿತವಾಗಿ ಕೊಡಲಾಗುತ್ತಿದೆ. ಸುಮಾರು 13,910 ಕೋಟಿಯಷ್ಟು ವಿದ್ಯುತ್ ಗ್ರಾಹಕರಿಗೆ ಸೇರಿದೆ ಎಂದು ಅವರು ಹೇಳಿದರು.
ಗೃಹಲಕ್ಷ್ಮಿ ಯೋಜನೆ 1.28 ಕೋಟಿ ಮಹಿಳೆಯರಿಗೆ ಸಹಕಾರವಾಗಿದೆ. 33 ಸಾವಿರ ಕೋಟಿ ಒಂದು ವರ್ಷಕ್ಕೆ ವೆಚ್ಚವಾಗಲಿದೆ.
ಸಿಲ್ಕ್ ಮಿಲ್ಕ್ ನಮ್ಮನ್ನು ಉಳಿಸಿದೆ. ಈ ಯೋಜನೆ ನಮ್ಮ ಭಾಗಕ್ಕೆ ಉತ್ತೇಜನ ನೀಡಲು ಸಹಕಾರ ಆಗುತ್ತಿದೆ. ಹಾಗಾಗಿ ನಿಮ್ಮ ಸಹಾಯ ಹಸ್ತ ನಮಗಿರಬೇಕು ಎಂದು ಕೇಳಿ ಕೊಳ್ಳುತ್ತೇನೆ ಎಂದರು.

ಜಿ.ಎಸ್ ಬಸವರಾಜ್ ನಿವಾಸಕ್ಕೆ ಕೆ.ಎನ್ ರಾಜಣ್ಣ ದಿಢೀರ್ ಭೇಟಿ
ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್, ಶಾಸಕ ಹೆಚ್.ವಿ. ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ಕೆಎಂಎಫ್ ಎಂ.ಡಿ ಜಗದೀಶ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಉಪವಿಭಾಗಾಧಿಕಾರಿ ರಿಷಿ ಆನಂದ್, ತಹಶೀಲ್ದಾರ್ ಸಿಬ್ಗತ್‍ವುಲ್ಲಾ, ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಸಿದ್ದರಾಮಯ್ಯರ ತಂಟೆಗೆ ಬಂದ್ರೆ ರಾಜ್ಯ ಹೊತ್ತಿ ಉರಿಯುತ್ತೆ; ಕೆ.ಎನ್ ರಾಜಣ್ಣ ಎಚ್ಚರಿಕೆ

About The Author

You May Also Like

More From Author

+ There are no comments

Add yours