ಕಾಂಗ್ರೆಸ್ ಸರ್ಕಾರವು ದೇವಸ್ಥಾನಗಳ ಅನುದಾನ ತಡೆ ಹಿಡಿದಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ: ಬಿ.ಸುರೇಶ್ ಗೌಡ
Tumkurnews
ತುಮಕೂರು: ಹಿಂದೂ ದೇವಾಲಯಗಳ ಅಭಿವೃದ್ಧಿಗೆ ನಮ್ಮ ಬಿಜೆಪಿ ಸರಕಾರ ಅತಿ ಹೆಚ್ಚು ಅನುದಾನವನ್ನು ನೀಡಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಹಿಂದೂ ದೇವಸ್ಥಾನಗಳಿಗೆ ನೀಡಿರುವ ಅನುದಾನವನ್ನು ತಡೆ ಹಿಡಿಯುವಂತೆ ಆದೇಶ ಮಾಡಿರುವುದನ್ನು ಖಂಡನೀಯ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗೂಳೂರು ಹೋಬಳಿ ಕಿತ್ತಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ಶನಿದೇವರ ದೇವಸ್ಥಾನದ ನಿರ್ಮಾಣ ಕಾಮಗಾರಿಯ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
ಜನರು ಒಗ್ಗಟ್ಟಾದರೆ ಗ್ರಾಮದ ಅಭಿವೃದ್ಧಿಯನ್ನು ಸರ್ಕಾರದ ಅನುದಾನಕ್ಕೆ ಪೇಚಾಡದೆ ನಾವೇ ಮಾಡಬಹುದು ಎನ್ನುವುದಕ್ಕೆ ಕಿತ್ತಗಾನಹಳ್ಳಿ ಗ್ರಾಮಸ್ಥರೇ ಸಾಕ್ಷಿ. ಗ್ರಾಮದಲ್ಲಿ ಸುಮಾರು 176 ವರ್ಷಗಳ ಇತಿಹಾಸ ಇರುವ ಶ್ರೀ ಶನೇಶ್ವರ ದೇವಸ್ಥಾನದ ನಿರ್ಮಾಣಕ್ಕೆ ಗ್ರಾಮಸ್ಥರು, ಗ್ರಾಮದ ಚುನಾಯಿತ ಪ್ರತಿನಿಧಿಗಳು, ಉದ್ಯಮಿಗಳು ಸೇರಿ ನಿರ್ಮಾಣ ಮಾಡುತ್ತಿರುವುದು ಗ್ರಾಮಗಳ ಸಬಲೀಕರಣದ ಸಂಕೇತ ಎಂದು ಶ್ಲಾಘಿಸಿದರು.
ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ವಿಫಲವಾಗಿದ್ದು ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಹೇಳಿದ್ದರು. ಈಗ ಅಕ್ಕಿಯು ಇಲ್ಲ ಹಣವು ಬರುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ 62 ಲಕ್ಷ ಜನರಿಗೆ ರೂ. 2000 ಹಣ ವರ್ಗಾವಣೆ ಮಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದರೆ ಇದು ಕೇವಲ ಅಂಕಿ ಸಂಖ್ಯೆಗಳಿಗೆ ಮಾತ್ರ ಸೀಮಿತವಾಗಿದೆ. ಎಲ್ಲ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿಲ್ಲ ಎಂದು ಅನೇಕ ಮಹಿಳೆಯರು ನನ್ನ ಬಳಿ ದೂರಿದ್ದಾರೆ ಎಂದು ಸುರೇಶ್ ಗೌಡ ತಿಳಿಸಿದರು.
ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಹೇಗಿದೆ ನೋಡಿ: ವಿಡಿಯೋ
200 ಯೂನಿಟ್ ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರವು ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದೆ. ರಾಜ್ಯವನ್ನು ಕಗ್ಗತ್ತಲೆ ಎಡೆಗೆ ದೂಕಿದೆ. ರೈತರು ಮಹಿಳೆಯರು ವಿದ್ಯಾರ್ಥಿಗಳು ಕರೆಂಟ್ ಇಲ್ಲದೆ ಕತ್ತಲಲ್ಲಿ ಕಾಲ ದೂಡುವ ಸ್ಥಿತಿ ರಾಜ್ಯದಲ್ಲಿ ನಿರ್ಮಾಣ ಆಗಿದೆ ಎಂದು ಸುರೇಶ್ ಗೌಡ ಆರೋಪಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಗೂಳೂರು ಶಿವಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಕವಿತಾ ಚಂದ್ರಶೇಖರ, ಸದಸ್ಯ ಯತೀಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಮ್ಮ, ಇಟ್ಟಿಗೆ ಜನಾರ್ಧನ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕೋಕಾ ಕೋಲಾ ಕಂಪನಿಯ ಗುಟ್ಟು ರಟ್ಟು ಮಾಡಿದ ಶಾಸಕ ಸುರೇಶ್ ಗೌಡ!
+ There are no comments
Add yours