ಮಧುಗಿರಿಯನ್ನು ಜಿಲ್ಲಾಕೇಂದ್ರ ಮಾಡಿ: ಸಿಎಂಗೆ ಬೇಡಿಕೆ ಇಟ್ಡ ಪರಮೇಶ್ವರ್
Tumkurnews
ಮಧುಗಿರಿ: ಬರಪೀಡಿತ ತಾಲ್ಲೂಕಾಗಿರುವ ಮಧುಗಿರಿಯನ್ನು ಜಿಲ್ಲಾಕೇಂದ್ರ ಮಾಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಪರಮೇಶ್ವರ್ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.
ಕ್ಷೀರ ಭಾಗ್ಯ ಸಂಭ್ರಮಾಚರಣೆ: ಡಿಫರೆಂಟಾಗಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ
ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಮಧುಗಿರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಎರಡು ಪ್ರಮುಖ ಬೇಡಿಕೆಗಳನ್ನು ಸಿಎಂ ಮುಂದಿಟ್ಟರು.
ರಾಜ್ಯದಲ್ಲಿ ಅತ್ಯಂತ ಶಾಶ್ವತ ಬರ ಪೀಡಿತ ತಾಲ್ಲೂಕಾಗಿರುವ ಮಧುಗಿರಿ ತಾಲ್ಲೂಕನ್ನು ಜಿಲ್ಲೆಯನ್ನಾಗಿಬೇಕು ಹಾಗೂ ತಾಲ್ಲೂಕಿನಲ್ಲಿರುವ ಏಷ್ಯಾದ ಅತಿದೊಡ್ಡ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸಿಕೊಡಬೇಕು, ಅದಕ್ಕಾಗಿ ಅನುದಾನ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
ಇಂದು ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಾಚರಣೆ: ಮಧುಗಿರಿಗೆ ಸಿಎಂ ಭೇಟಿ
+ There are no comments
Add yours