ಇಂದು ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಾಚರಣೆ: ಮಧುಗಿರಿಗೆ ಸಿಎಂ ಭೇಟಿ

1 min read

ಇಂದು ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭ

Tumkurnews
ತುಮಕೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 6, 2023ರ ಬುಧವಾರ ಬೆಳಿಗ್ಗೆ 11.30 ಗಂಟೆಗೆ ಮಧುಗಿರಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ `ಕ್ಷೀರಭಾಗ್ಯ’ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿವಿಧ ಇಲಾಖೆಗಳ ಮಳಿಗೆಗಳನ್ನು ಉದ್ಘಾಟಿಸುವರು. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಅವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮಿಶ್ರತಳಿ ಹೈನು ರಾಸುಗಳ ಚೆಕ್ ವಿತರಣೆ ಮಾಡುವರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು, ಭಾರತ ಸರ್ಕಾರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎ. ನಾರಾಯಣಸ್ವಾಮಿ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಬೆಂಗಳೂರಿನ ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷ ಎಲ್.ಬಿ.ಪಿ. ಭೀಮನಾಯ್ಕ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.

ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ಸಂಸದರುಗಳಾದ ಜಿ.ಎಸ್. ಬಸವರಾಜು, ಡಿ.ಕೆ. ಸುರೇಶ್, ಜಗ್ಗೇಶ್, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಡಾ. ಹೆಚ್.ಡಿ. ರಂಗನಾಥ್, ಜಿ.ಬಿ.ಜ್ಯೋತಿಗಣೇಶ್, ವಿಧಾನಪರಿಷತ್‍ನ ಶಾಸಕರುಗಳಾದ ಡಾ. ವೈ.ಎ. ನಾರಾಯಣಸ್ವಾಮಿ, ಕೆ.ಎ.ತಿಪ್ಪೇಸ್ವಾಮಿ, ಚಿದಾನಂದ ಎಂ.ಗೌಡ, ರಾಜೇಂದ್ರ ಆರ್. ಶಾಸಕರಾದ ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್‍ಬಾಬು, ಬಿ. ಸುರೇಶ್‍ಗೌಡ, ಹೆಚ್.ವಿ. ವೆಂಕಟೇಶ್ ಸೇರಿದಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಹಾಗೂ ನಿರ್ದೇಶಕರು, ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಅಧ್ಯಕ್ಷರುಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು.

18 ವರ್ಷ ತುಂಬಿದೆಯೇ? ತೆಂಗು ಉದ್ದಿಮೆ ಆರಂಭಿಸಿ, ಪಡೆಯಿರಿ 15 ಲಕ್ಷ ರೂ.ವರೆಗೆ ಸಹಾಯ ಧನ!
ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವನಿತಾ ಶರ್ಮ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿಗಳಾದ ತುಲಸಿ ಮದ್ದಿನೇನಿ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮ ಕೆ.ಫಾಯಿಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜಿ.ಸಿ.ಪ್ರಕಾಶ್, ಸಹಕಾರ ಸಂಘಗಳ ನಿಬಂಧಕರಾದ ಡಾ.ಕೆ. ರಾಜೇಂದ್ರ, ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ., ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಸಿಇಓ ಪ್ರಭು ಜಿ. ಅವರುಗಳು ಪಾಲ್ಗೊಳ್ಳಲಿದ್ದಾರೆ.

ಆಹಾರ ಸಂಸ್ಕರಣಾ ಉದ್ದಿಮೆಗಳ ಪ್ರಚಾರ ವಾಹನಕ್ಕೆ ಸಚಿವ ಪರಮೇಶ್ವರ್ ಚಾಲನೆ
ಕ್ಷೀರಭಾಗ್ಯ ಕಾರ್ಯಕ್ರಮ ಅನುಷ್ಟಾನಗೊಳಿಸಿದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿಗಳಾದ ಎಸ್.ವಿ.ರಂಗನಾಥ್ ಹಾಗೂ ಎ.ಎಸ್ ಪ್ರೇಮನಾಥ್ ಅವರುಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಹಾಲು ಮಹಾಮಂಡಳ, ಜಿಲ್ಲಾ ಹಾಲು ಒಕ್ಕೂಟಗಳು ಹಾಗೂ ರೋಟರಿ ಅವರ ಸಹಯೋಗದೊಂದಿಗೆ ‘ರೋಟರಿ ಕಾಮಧೇನು ಯೋಜನೆ’ಯಡಿ ರಾಜ್ಯಾದ್ಯಂತ ಮಿಶ್ರತಳಿ ಹೈನು ರಾಸುಗಳನ್ನು ವಿತರಿಸುವ ಕಾರ್ಯಕ್ರಮದ ಅಂಗವಾಗಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಚೆಕ್ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಎಂ.ಕೆ. ಅವರು ತಿಳಿಸಿದ್ದಾರೆ.

ಇಂದು ಮಾಂಸ ಮಾರಾಟ ನಿಷೇಧ

About The Author

You May Also Like

More From Author

+ There are no comments

Add yours