ಉಚಿತ ಲ್ಯಾಪ್‍ಟಾಪ್‍ಗಾಗಿ ಅರ್ಜಿ ಆಹ್ವಾನ
Tumkurnews
ತುಮಕೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮಾರ್ಚ್-2023ರ ಪೂರ್ವದಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ 2023-24ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕ ಕುಟುಂಬದ ಓರ್ವ ವಿದ್ಯಾರ್ಥಿಗೆ ಉಚಿತ ಲ್ಯಾಪ್ ಟಾಪ್ ನೀಡಲು ಅರ್ಜಿ ಆಹ್ವಾನಿಸಿದೆ.
ಉಚಿತ ಲ್ಯಾಪ್‍ಟಾಪ್: ವಿದ್ಯಾರ್ಥಿಗಳಿಂದ ಆರ್ಜಿ ಆಹ್ವಾನ
ಕಾರ್ಮಿಕ ಅಧಿಕಾರಿ ತುಮಕೂರು ಉಪವಿಭಾಗ, ತುಮಕೂರು ಕಚೇರಿಯ ಕಾರ್ಯವ್ಯಾಪ್ತಿಯಲ್ಲಿ (ತುಮಕೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಕುಣಿಗಲ್) ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಸೆಪ್ಟೆಂಬರ್ 20ರೊಳಗೆ ಸಲ್ಲಿಸಬೇಕು.
18 ವರ್ಷ ತುಂಬಿದೆಯೇ? ತೆಂಗು ಉದ್ದಿಮೆ ಆರಂಭಿಸಿ, ಪಡೆಯಿರಿ 15 ಲಕ್ಷ ರೂ.ವರೆಗೆ ಸಹಾಯ ಧನ!
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆ ಕಚೇರಿಯನ್ನು ಸಂಪರ್ಕಿಸಬೇಕೆಂದು ಕಾರ್ಮಿಕ ಅಧಿಕಾರಿ ಹೆಚ್.ಎನ್. ರಮೇಶ್ ತಿಳಿಸಿದ್ದಾರೆ.
ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಹೇಗಿದೆ ನೋಡಿ: ವಿಡಿಯೋ
+ There are no comments
Add yours